• search
  • Live TV
ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೋವಿಡ್ ಸೋಂಕು

|

ರಾಯಚೂರು, ಸೆಪ್ಟೆಂಬರ್ 13: ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೋವಿಡ್-19 ಸೋಂಕು ತಗುಲಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಅವರನ್ನು ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Fact Check: ಕೋವಿಡ್ ರೋಗಿಗಳಿಗೆ ಐಸಿಎಂಆರ್‌ನಿಂದ ಐವರ್ಮೆಕ್ಟಿನ್ ಶಿಫಾರಸು?

ಸಂಸತ್‌ನ ಮುಂಗಾರು ಅಧಿವೇಶನ ಸೆ. 14ರ ಸೋಮವಾರದಿಂದ ಆರಂಭವಾಗುತ್ತಿದೆ. ಆಸ್ಪತ್ರೆಗೆ ದಾಖಲಾಗಿರುವ ಕಾರಣ ಅಶೋಕ್ ಗಸ್ತಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಾಧ್ಯವಿರಲಿಲ್ಲ. ಅವರು ರಾಜ್ಯಸಭೆ ಸದಸ್ಯರಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.

ಭಾರತದಲ್ಲಿ 45 ಲಕ್ಷದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ಶಾಸಕರಿಗೂ ಸೋಂಕು: ಕೊಪ್ಪಳ ಜಿಲ್ಲೆಯ ಕುಷ್ಟಗಿ ಕ್ಷೇತ್ರದ ಶಾಸಕ ಅಮರೇಗೌಡ ಬಯ್ಯಾಪುರ ಅವರಿಗೂ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದ ಈ ಜಿಲ್ಲೆಯಲ್ಲಿ 2 ಲಕ್ಷ ಕೋವಿಡ್ ಸೋಂಕಿತರು!

ಕರ್ನಾಟಕದಲ್ಲಿ ಶನಿವಾರ 9140 ಹೊಸ ಕೋವಿಡ್ ಸೋಂಕಿನ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 4,49,551ಕ್ಕೆ ಏರಿಕೆಯಾಗಿದೆ. ಇದುವರೆಗೂ ರಾಜ್ಯದಲ್ಲಿ 7161 ಜನರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 97,815. ಇದುವರೆಗೂ ಆಸ್ಪತ್ರೆಯಿಂದ 344556 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,67,183ಕ್ಕೆ ಏರಿಕೆಯಾಗಿದೆ.

English summary
BJP leader and Rajya Sabha member from Karnataka Ashok Gasti tested positive for COVID 19. He is admitted to private hospital in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X