ಉಪ ಚುನಾವಣೆ ಮೇಲೆ ಜಾರಕಿಹೊಳಿ ಸಿಡಿ ಪ್ರಕರಣ ಪರಿಣಾಮ ಬೀರಲ್ಲ: ಸಚಿವ ಶ್ರೀರಾಮುಲು
ರಾಯಚೂರು, ಮಾರ್ಚ್ 29: ರಮೇಶ್ ಜಾರಕಿಹೊಳಿ ಇದ್ದಾರೆನ್ನಲಾದ ಸಿಡಿ ಪ್ರಕರಣ ಸದ್ಯ ಎಸ್ಐಟಿ ತನಿಖೆ ಮಾಡುತ್ತಿದ್ದು, ಈ ಪ್ರಕರಣ ಉಪ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ರಾಯಚೂರು ಜಿಲ್ಲೆ ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರ ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಿ ಮಾಧ್ಯಮದವರೊಂದಿಗೆ ಸಚಿವ ಬಿ.ಶ್ರೀರಾಮುಲು ಮಾತನಾಡಿದರು.
ಕ್ಷೇತ್ರಗಳ ಅಭಿವೃದ್ಧಿ ವಿಚಾರವನ್ನು ಮುಂದಿಟ್ಟುಕೊಂಡು ಜನರಿಂದ ಮತ ಕೇಳುತ್ತೇವೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸಂಸದರು ಗುಲಾಮರಂತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಕಾಂಗ್ರೆಸ್ ನಾಯಕರು ಸೋಲಿನ ಭೀತಿಯಿಂದ ಈ ರೀತಿ ಮಾತನಾಡುತ್ತಾರೆ. ಸಿದ್ದರಾಮಯ್ಯ ಹಿರಿಯರು ಅವರು ಈ ರೀತಿಯಾಗಿ ಮಾತನಾಡಬಾರದು ಎಂದು ತಿಳಿಸಿದರು.
Recommended Video
ಯಡಿಯೂರಪ್ಪನನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ | Oneindia Kannada












Click it and Unblock the Notifications