ರಾಯಚೂರು: ಅನಾಥ ಬಾಲಕಿ ಮೇಲೆ ಕಾವಲುಗಾರನಿಂದಲೇ ಅತ್ಯಾಚಾರ
ರಾಯಚೂರು, ಫೆಬ್ರವರಿ 01: ಅನಾಥಾಶ್ರಮದ (ಬಾಲಮಂದಿರ) ಬಾಲಕಿ ಮೇಲೆ ಅನಾಥಾಶ್ರಮದ ಕಾವಲುಗಾರನೇ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬಾಲಮಂದಿರದಲ್ಲಿ ಆಶ್ರಯ ಪಡೆದು ಎಸ್ಎಸ್ಎಲ್ಸಿ ಕಲಿಯುತ್ತಿದ್ದ ಬಾಲಕಿಯ ಮೇಲೆ ಅದೇ ಬಾಲಮಂದಿರದಲ್ಲಿ ಹೊರಗುತ್ತಿಗೆ ಮೇಲೆ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಸಿದ್ದಯ್ಯ ಎಂಬಾತ ಅತ್ಯಾಚಾರ ಎಸಗಿದ್ದಾನೆ.
ಶಾಲೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ ಕಾವಲುಗಾರ ಸಿದ್ದಯ್ಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಆಕೆಯ ಸಹೋದರ ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣೆ ವಿಭಾಗಕ್ಕೆ ದೂರು ನೀಡಿದ್ದಾನೆ. ಆದರೆ ಅವರು ಶೀಘ್ರವಾಗಿ ತನಿಖೆ ನಡೆಸದೆ, ಜನವರಿ 30 ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ, ಜಿಲ್ಲಾಧಿಕಾರಿ ವೆಂಕಟೇಶ್ ಶುಕ್ರವಾರ ಬಾಲಮಂದಿರಕ್ಕೆ ಭೇಟಿ ನೀಡಿದ್ದಾರೆ.
ಅತ್ಯಾಚಾರ ಘಟನೆ ನವೆಂಬರ್ ನಲ್ಲಿಯೇ ನಡೆದಿದ್ದು, ದೂರು ತೆಗೆದುಕೊಳ್ಳಲು ವಿಳಂಬವಾಗಿದೆ. ಮಾಹಿತಿ ತಿಳಿದ ಕೂಡಲೇ ಜಿಲ್ಲಾಧಿಕಾರಿಗಳು ಬಾಲಮಂದಿರದ ಮೇಲ್ವಿಚಾರ ಸೈಯದ್ ಪಾಷಾ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿ ಗುರುಪ್ರಸಾದ್ ಅನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿದ್ದಾರೆ.
ಘಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕಾವಲುಗಾರ ಸಿದ್ದಯ್ಯ ಪರಾರಿಯಾಗಿದ್ದಾನೆ. ಪೊಲೀಸರು ಆತನ ಹುಡುಕಾಟ ನಡೆಸಿದ್ದಾರೆ.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ












Click it and Unblock the Notifications