ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರು: ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯಕ್ಕೆ ಅರಕೇರಾ ಗ್ರಾಮ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು ಸೆಪ್ಟೆಂಬರ್‌, 23: ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅಕ್ಟೋಬರ್ 15ರಂದು ಜಿಲ್ಲೆಯ ಅರಕೇರಾ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವ ಆರ್.ಅಶೋಕ್ ಅವರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಮಾತನಾಡಿ, "ಮುಂದಿನ ತಿಂಗಳ ಮೂರನೇ ಶನಿವಾರ ಅರಕೇರಾ ಗ್ರಾಮದಲ್ಲಿ ಬೆಳಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಸಚಿವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಕೂಡಲೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಸಮುದಾಯ ಭವನ, ಅಂಗನವಾಡಿ ಕಟ್ಟಡ ಸೇರಿದಂತೆ ಇತರೆ ಸಮಸ್ಯೆಗಳನ್ನು ಪರಿಶೀಲಿಸಬೇಕು," ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಬೆಲೆ ಕುಸಿತ; ಲಿಂಗಸೂಗೂರು ರೈತರ ಮುಖದಲ್ಲಿ ಕಾಂತಿ ತರದ ಸೂರ್ಯಕಾಂತಿಬೆಲೆ ಕುಸಿತ; ಲಿಂಗಸೂಗೂರು ರೈತರ ಮುಖದಲ್ಲಿ ಕಾಂತಿ ತರದ ಸೂರ್ಯಕಾಂತಿ

ಈ ನಿಟ್ಟಿನಲ್ಲಿ ಮಳಿಗೆಗಳನ್ನು ಆರಂಭಿಸಿ ಸಾರ್ವಜನಿಕರಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಗ್ರಾಮ ವಾಸ್ತವ್ಯದಲ್ಲಿ ಗ್ರಾಮದ ಪಹಣಿಗಳಲ್ಲಿರುವ ಲೋಪದೋಷ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಬೇಕು. ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಬೇಕು. ಆಧಾರ್ ಕಾರ್ಡ್ ಅನುಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

 ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ

ಕಂದಾಯ ಸಚಿವರ ಭೇಟಿ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಬೀಡುಬಿಟ್ಟು ಸರಿಯಾದ ವ್ಯವಸ್ಥೆಯನ್ನು ಕೈಗೊಂಡು ಹಬ್ಬದ ವಾತಾವರಣವನ್ನು ಅಧಿಕಾರಿಗಳು ನಿರ್ಮಾಣ ಮಾಡಬೇಕು. ಗ್ರಾಮಸ್ಥರು ಹಾಗೂ ಹೆಣ್ಣು ಮಕ್ಕಳು ಪೂರ್ಣ ಕುಂಭದೊಂದಿಗೆ ಸಚಿವರನ್ನು ಬರ ಮಾಡಿಕೊಳ್ಳುತ್ತಾರೆ. ಸಚಿವರು ಜನರ ಕುಂದು-ಕೊರತೆಗಳನ್ನು ಆಲಿಸಲಿದ್ದಾರೆ. ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇಕಡಾ 100ರಷ್ಟನ್ನೂ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

 ಸಭೆಗೆ ಹಾಜರಾದ ಇಲಾಖೆವಾರು ಅಧಿಕಾರಿಗಳು

ಸಭೆಗೆ ಹಾಜರಾದ ಇಲಾಖೆವಾರು ಅಧಿಕಾರಿಗಳು

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ರಜನಿ ಕಾಂತ್, ಭೂದಾಖಲೆಗಳ ಕಚೇರಿಯ ಉಪನಿರ್ದೇಶಕಿ ರೇಷ್ಮಾ ಪಾಟೀಲ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶರಣಬಸವ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶರಣಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ್‌ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ವಿ.ನಾಯಕ, ಕಾರ್ಮಿಕ ಇಲಾಖೆ ಅಧಿಕಾರಿ ಆರ್.ವೆಂಕಟರಾಮಣಪ್ಪ ಸೇರಿದಂತೆ ವಿವಿಧ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

 ಸಿಬ್ಬಂದಿ ನಿಯೋಜಿನೆಗೆ ಕ್ರಮ

ಸಿಬ್ಬಂದಿ ನಿಯೋಜಿನೆಗೆ ಕ್ರಮ

ಆಯಾ ಇಲಾಖೆಗಳ ವೇದಿಕೆ ಅವರಣದಲ್ಲಿ ನಿರ್ಮಿಸಿರುವ ಮಳಿಗೆಗಳಲ್ಲಿ ಇಲಾಖೆಯ ಮಾಹಿತಿಯೊಂದಿಗೆ ಸಿಬ್ಬಂದಿ ನಿಯೋಜಿನೆ ಮಾಡಬೇಕು. ಇಲಾಖೆಯಿಂದ ನೀಡುತ್ತಿರುವ ಸವಲತ್ತುಗಳ ಕುರಿತು ಬ್ಯಾನರ್‌ಗಳನ್ನು ಅಳವಡಿಸಬೇಕು. ಮಳಿಗೆಗಳಲ್ಲಿ ಅಗತ್ಯ ವಸ್ತು ಪ್ರದರ್ಶನ, ಕರ ಪತ್ರಗಳ ಮಾಹಿತಿ ಪುಸ್ತಕದ ವ್ಯವಸ್ಥೆ, ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ವೇದಿಕೆಯ ಮೇಲೆ ಪ್ರಮಾಣ ಪತ್ರ ವಿತರಿಸುವ ಕಾರ್ಯ ನಿರ್ವಹಣೆಗೆ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ನಿಯೋಜಿತ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

 ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಕಲ ಸಿದ್ಧತೆ

ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಕಲ ಸಿದ್ಧತೆ

ಅಕ್ಟೋಬರ್ 15ರಂದು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಇದಕ್ಕಾಗಿ ವೇದಿಕೆ ನಿರ್ಮಾಣ, ಶಾಮಿಯಾನ, ಧ್ವನಿ ವರ್ಧಕ ಮತ್ತು ಬೆಳಕು, ಕೊಠಡಿಯ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ನೀರಿನ ವ್ಯವಸ್ಥೆ, ಮೆರವಣಿಗೆ ವ್ಯವಸ್ಥೆ, ಕಂದಾಯ ಸಚಿವರಿಂದ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೊಳ್ಳುವ ಕಾಮಗಾರಿ ಪಟ್ಟಿ ತಯಾರಿಸುವಂತೆ ಆಯಾ ಇಲಾಖೆಗಳ ಮುಖ್ಯಸ್ಥರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.

English summary
Minister R Ashok will conduct grama vastavya On October 15, preparations in Arakera village of Raichur district, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X