ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಪ್ರವಾಹ ಪೀಡಿತ ಜಿಲ್ಲೆಗಳಿಗೆ 50 ಸಾವಿರ ಕೋಟಿ ರೂ. ಪರಿಹಾರ ಕೊಡಿ"

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಅಕ್ಟೋಬರ್ 23: ಪ್ರವಾಹ ಪರಿಸ್ಥಿತಿಯಿಂದಾಗಿ ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಸರ್ಕಾರಕ್ಕೆ ಮಾನವೀಯತೆಯಿಲ್ಲ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ರಾಯಚೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಸರ್ಕಾರ ಹಾಗೂ ವಿವಿಧ ಪಕ್ಷಗಳ ರಾಜಕಾರಣಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಎಲ್ಲರೂ ಹೆಲಿಕಾಪ್ಟರ್ ರಾಜಕಾರಣಿಗಳಾಗಿದ್ದಾರೆ. ಯಡಿಯೂರಪ್ಪ ಬಳಿ ಹೆಲಿಕಾಪ್ಟರ್ ಇದೆ. ಜೆಡಿಎಸ್, ಕಾಂಗ್ರೆಸ್ಸಿನವರು ಹೆಲಿಕಾಪ್ಟರಿನಲ್ಲೇ ಬರುತ್ತಾರೆ. ಅವರಿಗೆ ಕಾರಲ್ಲಿ ಓಡಾಡಲು ಆಗದ ರೋಗ ಬಂದಿದೆ ಅಂತ ವೈದ್ಯರು ಸರ್ಟಿಫಿಕೇಟ್ ಕೊಡಬೇಕು ಎಂದರು.

ಪ್ರವಾಹದಿಂದ ಉತ್ತರ ತತ್ತರ: ಉಸ್ತುವಾರಿಗಳು ತರಾಟೆಗೆ!ಪ್ರವಾಹದಿಂದ ಉತ್ತರ ತತ್ತರ: ಉಸ್ತುವಾರಿಗಳು ತರಾಟೆಗೆ!

ಕರ್ನಾಟಕವನ್ನು ಕೇಂದ್ರ ಸರ್ಕಾರ ಗುಲಾಮರ ರೀತಿ ನೋಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಕಡೆ ಹೋಗುತ್ತಾರೆ, ಆದರೆ ಕರ್ನಾಟಕಕ್ಕೆ ಮಾತ್ರ ಬರಲ್ಲ. ನಮ್ಮ ಎಂಪಿಗಳು ದನಕಾಯುತ್ತಿದ್ದಾರಾ? ಯಾಕೆ ಪ್ರಧಾನಿಯನ್ನು ಕರೆದುಕೊಂಡು ಬರುತ್ತಿಲ್ಲ ಅಂತ ಪ್ರಶ್ನಿಸಿದರು.

Rs 50 Thousand Crores Give For Flood-Affected Districts

ಕೇಂದ್ರ ಸಚಿವ ಸದಾನಂದಗೌಡ ಸತ್ತರೂ ನಗ್ತಾರೆ, ಬದುಕಿದರೂ ನಗ್ತಾರೆ ಅವರ ನಗುವೆ ಒಂದು ವಿಚಿತ್ರ ಎಂದರು. ಪ್ರವಾಹ ಪೀಡಿತ ಜಿಲ್ಲೆಗಳಿಗೆ 50 ಸಾವಿರ ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ ವಾಟಾಳ್ ನಾಗರಾಜ್, ಅ.29 ರಂದು ಸಂಸದರನ್ನು ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಮುಂದೆ ಹರಾಜು ಹಾಕಿ ಪ್ರತಿಭಟನೆ ಮಾಡುತ್ತೇವೆ. ಕೊಳ್ಳುವವರು ಬಂದು ಕೊಳ್ಳಬಹುದು, ವಿನೂತನ ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ನಾನು ಗೆಲ್ಲಲೇಬೇಕು ಗೆದ್ದರೆ ವಿಧಾನ ಪರಿಷತ್ತಿನಲ್ಲಿ ಧ್ವನಿ ಭಾರೀ ಜೋರಾಗಿರುತ್ತದೆ ಎಂದು ಶಿಕ್ಷಕರ ಮತಯಾಚಿಸಿದರು. ಪ್ರೌಢಶಾಲಾ ಶಿಕ್ಷಕರಿಗೆ, ಪಿಯು ಉಪನ್ಯಾಸಕರಿಗೆ ಬಡ್ತಿ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಇಟ್ಟುಕೊಂಡು ನವೆಂಬರ್ 1 ರಿಂದ ಒಂದು ವರ್ಷದವರೆಗೆ ಹೋರಾಟ ಮಾಡುವುದಾಗಿ ಹೇಳಿದರು.

ಕೊರೊನಾ ಸಮಯದಲ್ಲಿ ಕಾಲೇಜು ತೆರೆಯಲು ನನ್ನ ವಿರೋಧವಿದೆ. ಆನ್‍ಲೈನ್ ಕ್ಲಾಸ್ ಒಂದು ಬೋಗಸ್, ಖಾಸಗಿ ಸಂಸ್ಥೆಗಳ ಹಣ ವಸೂಲಿ ವಿರುದ್ಧ ಹೋರಾಟ ಮಾಡುತ್ತೇವೆ. ಕಾಲೇಜು ಆರಂಭಿಸುವುದು ಬೇಡ, ಶೂನ್ಯ ವರ್ಷ ಅಂತ ತೀರ್ಮಾನ ಮಾಡಬೇಕು. ಕೋವಿಡ್ ನಿಂದ ವಿದ್ಯಾರ್ಥಿ, ಶಿಕ್ಷಕ ಸತ್ತರೆ ಒಂದು ಕೋಟಿ ರುಪಾಯಿ ಪರಿಹಾರ ಕೊಡಬೇಕೆಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.

English summary
People in North Karnataka are in dire straits due to flooding. the government has no humanity, Northeastern Teacher's constituency Candidate Vatal Nagaraj said that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X