Raichur: ಆರ್‌ಟಿಪಿಎಸ್, ವೈಟಿಪಿಎಸ್, ಕುಗ್ಗಿದ ವಿದ್ಯುತ್ ಬೇಡಿಕೆ

ರಾಯಚೂರು ಜು.04: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಬೇಡಿಕೆ ಕುಸಿತವಾಗಿದೆ. ಇದರಿಂದಾಗಿ ಆರ್‌ಟಿಪಿಎಸ್ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.

ರಾಜ್ಯದ ಎಲ್ಲೆಡೆ ಮಳೆಯಾಗುತ್ತಿರುವುದರಿಂದ ಜಲ ವಿದ್ಯುತ್ ಘಟಕಗಳ ಉತ್ಪಾದನೆ ಮತ್ತು ಪವನ್ ಗಾಳಿ (ವಿಂಡೋ)ಯಿಂದ ವಿದ್ಯುತ್ ಹೆಚ್ಚಳವಾಗಿರುವುದರಿಂದ, ಬೇಸಿಗೆಯಲ್ಲಿ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಮೇಲಿದ್ದ ಒತ್ತಡ ಈಗ ಕಡಿಮೆಯಾಗಿದೆ.

RTPS YTPS reduced power demand

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಒಟ್ಟು ಎಂಟು ವಿದ್ಯುತ್ ಘಟಕಗಳ ಪೈಕಿ ಆರು ವಿದ್ಯುತ್ ಘಟಕಗಳಿಂದ ಉತ್ಪಾದನೆ ಮಾಡಲಾಗುತ್ತಿದೆ. 210 ಮೆಗಾವ್ಯಾಟ್ ಸಾಮರ್ಥ್ಯದ 7ನೇ ವಿದ್ಯುತ್ ಘಟಕ ವಾರ್ಷಿಕ ನಿರ್ವಹಣೆಗಾಗಿ ಬಂದ್ ಮಾಡಲಾಗಿದೆ. ಒಟ್ಟು 1720ಮೆಗಾವ್ಯಾಟ್ ಸಾಮರ್ಥ್ಯದಲ್ಲಿ ಈಗ ಇನ್ನೂಳಿದ ವಿದ್ಯುತ್ ಘಟಕಗಳಿಂದ ಒಟ್ಟು 853 ಮೆಗಾವ್ಯಾಟ್ ಉತ್ಪಾದನೆ ಆಗುತ್ತಿದೆ.

ಮೂರು ವರ್ಷಗಳಿಂದ 210 ಮೆಗಾವ್ಯಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕದ ಉತ್ಪಾದನೆ ಬಂದ್ ಮಾಡಲಾಗಿದೆ. ಯರಮರಸ್ ಶಾಖೋತ್ಪನ್ನ ವಿದ್ಯುತ್ (ವೈಟಿಪಿಎಸ್) 800 ಮೆಗಾವ್ಯಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕದಿಂದ 400 ಮೆಗಾವ್ಯಾಟ್ ಮತ್ತು 2ನೇ ವಿದ್ಯುತ್ ಘಟಕದಿಂದ 405 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ರಾಜ್ಯದ ಬೇಡಿಕೆಗೆ ತಕ್ಕಂತೆ ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿದ್ದ ಆರ್‌ಟಿಪಿಎಸ್, ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯಲ್ಲಿ ತೊಡಗಿವೆ.

RTPS YTPS reduced power demand

ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಮಾಣದಲ್ಲಿ ಶಾಖೋತ್ಪನ್ನ ವಿದ್ಯುತ್ ಘಟಕಗಳ ಉತ್ಪಾದನೆ ಬೇಡಿಕೆ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವರುಣಾ ಕೃಪೆಯಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ಬತ್ತಿ ಬರಡಾಗಿದ್ದ ಕೆರೆಗಳು, ಹಳ್ಳಗಳು , ಕೃಷ್ಣಾನದಿ ಮತ್ತು ತುಂಗಾಭದ್ರ ನದಿಗಳಿಗೆ ಮತ್ತೆ ಜೀವಕಳೆ ಬಂದಿದೆ.

ರಾಜ್ಯದ ಎಲ್ಲೆಡೆ ಮಳೆಯಾಗುತ್ತಿರುವುದರಿಂದ ಜಲ ವಿದ್ಯುತ್ ಘಟಕಗಳ ಉತ್ಪಾದನೆ ಮತ್ತು ಪವನ್ ಗಾಳಿ (ವಿಂಡೋ)ಯಿಂದ ಆರು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿರುವುದರಿಂದ, ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಮೇಲಿದ್ದ ಒತ್ತಡ ಈಗ ಕಡಿಮೆಯಾಗಿದೆ ಎಂದು ಆರ್‌ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಸುರೇಶ್ ಬಾಬು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+