ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ

|
Google Oneindia Kannada News

ರಾಯಚೂರು, ಏ.25: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ ಖಂಡಿಸಿ ವಿದ್ಯಾರ್ಥಿಗಳು ರಾಯಚೂರಿನಲ್ಲಿ ಇಂದು(ಏ.25) ಪ್ರತಿಭಟನೆ ನಡೆಸಿದರು.

ಮಾಣಿಕಪ್ರಭು ದೇವಾಲಯದಿಂದ ಡಿಸಿ ಕಚೇರಿವರೆಗೆ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.ವಿದ್ಯಾರ್ಥಿನಿ ಸಾವಿಗೆ ಕಾರಣರಾದವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ತನಿಖೆ ಚುರುಕುಗೊಳಿಸಬೇಕು ಎಂದು ಆಗ್ರಹಿಸಿದರು.

ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ಸಿಐಡಿಗೆ ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ಸಿಐಡಿಗೆ

ಏ.16ರಂದು ವಿದ್ಯಾರ್ಥಿನಿ ಶವ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುದರ್ಶನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ನವೋದಯ ಇಂಜಿನಿಯರಿಂಗ್ ಕಾಲೇಜಿನ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಏಪ್ರಿಲ್ 13ರಂದು ಪರೀಕ್ಷೆ ಬರೆಯಲು ಹೋಗಿದ್ದಳು, ಬಳಿಕ ನಾಪತ್ತೆಯಾಗಿದ್ದಳು. ಏಪ್ರಿಲ್ 16ರಂದು ಕಾಲೇಜಿನಿಂದ 4 ಕಿ.ಮೀ.ದೂರದಲ್ಲಿ ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Students protest murder of engineering student in Raichur

ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಡೆತ್ ನೋಟ್ ಸಿಕ್ಕಿದೆ ಎಂದು ಪೊಲೀಸರು ಹೇಳಿದ್ದರು. ಆದರೆ, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ರಾಜ್ಯದಲ್ಲಿ ಆಕ್ರೋಶವೆದ್ದಿದೆ. ವಿದ್ಯಾರ್ಥಿನಿಗೆ ನ್ಯಾಯಕೊಡಿಸಿ ಎಂದು ಒತ್ತಾಯಿಸುತ್ತಿದ್ದಾರೆ.

English summary
After details of police case emerged. several engineering and medical students from colleges in Raichur gathered to seek justice for engineering student who murdred and raped by unknown person.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X