ರಾಜ್ಯ ಬೆಳಗುವ ನಂದಾದೀಪ RTPS ಬಳಿ ಬೃಹತ್ ಮರಗಳ ಮಾರಣಹೋಮ, ಪರಿಸರ ಪ್ರೇಮಿಗಳು ಹೇಳುವುದೇನು?
ರಾಯಚೂರು, ನವೆಂಬರ್, 9: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ವಿದ್ಯುತ್ ಘಟಕಗಳಿಂದ ಉಷ್ಣಾಂಶ ಹೆಚ್ಚಾಗಿರುತ್ತದೆ. ಅಲ್ಲದೆ ಹೊರ ಬರುವ ಬೂದಿಯನ್ನು ತಡೆಗೆ ಆರ್‌ಟಿಪಿಎಸ್ ಆವರಣದಲ್ಲಿ ಸುತ್ತಲಿನ ಪ್ರದೇಶದಲ್ಲಿ ಮರಗಳನ್ನು ಬೆಳೆಸಲಾಗಿದೆ. ಆದರೆ ಇದೀಗ ಈ ಮರಗಳನ್ನು ಮಾರಣಹೋಮ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿವೆ.
ಪ್ರತಿವರ್ಷ ಪರಿಸರ ದಿನದಂದು ಸಾವಿರಾರು ಸಸಿಗಳನ್ನು ನೆಟ್ಟು ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ. ಮರಗಿಡ ಬೆಳೆಸಿ, ಪರಿಸರ ಉಳಿಸಿ ಎಂದು ಆರ್ ಟಿಪಿಎಸ್ ಆಡಳಿತ ಮಂಡಳಿ ಘೋಷಿಸುತ್ತಾರೆ. ಇದು ಕೇವಲ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ, ಭಾಷಣಕ್ಕೆ ಸೀಮಿತವಾಯಿತಾ ಎಂದು ಸಾರ್ವಜನಿಕರೂ ಮಾತನಾಡಿಕೊಳ್ಳುತ್ತಾರೆ. ಆದರೆ, ವಾಸ್ತವದಲ್ಲಿ ಮರಗಳನ್ನು ಉಳಿಸುವ ಬದಲು ಉರುಳಿಸುವ ಕೆಲಸವೇ ಕಂಡು ಬರುತ್ತದೆ.

ಇದಕ್ಕೆ ಸಾಕ್ಷಿ ಎಂಬಂತೆ ಆರ್‌ಟಿಪಿಎಸ್‌ನ ಸುತ್ತಲಿನ ಪ್ರದೇಶದಲ್ಲಿ ಮರಗಳ ಸಂಖ್ಯೆ ಕ್ಷೀಣಿಸುತ್ತಿದೆ. ಮರ ಕತ್ತರಿಸುವ ಸಂಸ್ಕೃತಿ ದಿನೇ ದಿನೇ ಹೆಚ್ಚುತ್ತಿದೆ. ಆದರೂ ಯಾರೂ ಕೇಳುವರಿಲ್ಲದೇ ಪರಿಸರ ಜಾಗೃತಿ ಬದಲು ದುರ್ಗತಿ ಎದುರಾಗುತ್ತಿದೆ. ಎಗ್ಗಿಲ್ಲದೆ ಹಾಡಹಗಲೇ ಕತ್ತರಿಸುತ್ತಿದ್ದಾರೆ. ದೊಡ್ಡದಾಗಿ ಬೆಳೆದಿದ್ದ ಮರಗಳನ್ನು ಪರವಾನಗಿ ಇಲ್ಲದೇ ಕತ್ತರಿಸಿ ಟ್ರ್ಯಾಕ್ಟರ್‌ಗೆ ತುಂಬಲಾಗುತ್ತಿದೆ.
ಸಂಶಯ ಬಾರದಂತೆ ಮೊದಲು ಮರದ ತೊಗಟೆ ಸುಲಿದು, ಮರುದಿನ ಒಂದು ಟೊಂಗೆ ಕಡಿದು, ಅದಾದ ಎರಡು ದಿನ ಬಳಿಕ ಅರ್ಧ ಮರ ಕತ್ತರಿಸಿ ಹಂತಹಂತವಾಗಿ ಮರಗಳ ಮಾರಣ ಹೋಮ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಜೀವಂತ ಮನುಷ್ಯನ ಚರ್ಮ ಸುಲಿದಂತೆ ಜೀವಂತ ಮರಗಳ ತೊಗಟೆ ಸುಲಿದು, ಚಿಗುರು ಚಿವುಟಿ, ಟೊಂಗೆ ಕಡಿದು, ನಂತರ ಬುಡಕ್ಕೇ ಕೊಡಲಿ ಏಟು ಹಾಕುವ ಮೂಲಕ ನಿಧಾನ ವಿಷದಂತೆ ಮರ- ಗಿಡಗಳನ್ನು ಕೊಲ್ಲುತ್ತಿರುವುದು ಅಕ್ಷಮ್ಯ ಅಪರಾಧ. ಸದ್ಯದ ಬರ ಸ್ಥಿತಿಯಲ್ಲಿ ಇಂತಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಯಂತ್ರಿಸಬೇಕು ಎಂದು ಸಾರ್ವಜನಿಕರೂ ಒತ್ತಾಯಿಸಿದ್ದಾರೆ.
ವಿದ್ಯುತ್ ಘಟಕಗಳ ಕೂಲಿಂಗ್ ಟವರ್‌ಗಳಿಗೆ ಮರಗಳ ಟೊಂಗೆಗಳು ತಗುಲಿದ್ದು, ಇದರಿಂದಾಗಿ ಟೊಂಗೆಗಳನ್ನು ಕತ್ತರಿಸುತ್ತಿದ್ದಾರೆ. ದೊಡ್ಡ ದೊಡ್ಡ ಮರಗಳು ಕಡಿಯುತ್ತಿಲ್ಲ. ಮರಗಳು ಕಡಿಯುವುದು ಕಂಡು ಬಂದಲ್ಲಿ ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆರ್‌ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರು ಸುರೇಶ್ ಬಾಬು ಹೇಳಿದ್ದಾರೆ.
ಸಮಸ್ಯೆಗಳದ್ದೇ ಕಾರುಬಾರು
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ವ್ಯಾಪ್ತಿಯಲ್ಲಿರುವ ಚುಂಚನಕಟ್ಟೆಯು ಭಕ್ತರ ಇಷ್ಟಾರ್ಥ ನೆರವೇರಿಸುವ ಪವಿತ್ರ ಕ್ಷೇತ್ರವಾಗಿಯೂ, ಪ್ರಕೃತಿ ಪ್ರಿಯರ ಸೆಳೆಯುವ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದ್ದು, ಪ್ರತಿನಿತ್ಯವೂ ಇಲ್ಲಿಗೆ ನಾಸ್ತಿಕ, ಆಸ್ತಿಕರೆನ್ನದೆ ಎಲ್ಲರೂ ಭೇಟಿ ನೀಡುತ್ತಾರೆ. ಆದರೆ ಈ ಕ್ಷೇತ್ರಕ್ಕೆ ಬಂದವರು ಇಲ್ಲಿನ ಅವ್ಯವಸ್ಥೆ ನೋಡಿದ ಬಳಿಕ ಹಿಡಿಶಾಪ ಹಾಕಿಕೊಂಡು ಹಿಂತಿರುಗುವುದು ಮಾಮೂಲಿಯಾಗಿದೆ.
ದೈವಿಕ ತಾಣವಾಗಿಯೂ ಪ್ರವಾಸಿ ಸ್ಥಳವಾಗಿಯೂ ಗುರುತಿಸಿಕೊಂಡು ಪ್ರತಿನಿತ್ಯ ನೂರಾರು ಮಂದಿಯನ್ನು ಸೆಳೆಯುವ ಸ್ಥಳ ಅಭಿವೃದ್ಧಿ ಹೊಂದಿಲ್ಲದೆ ಹೋದರೂ ಸ್ವಚ್ಛವಾಗಿಯಾದರೂ ಇರಬೇಕಿತ್ತು. ಆದರೆ ಅದ್ಯಾವುದೂ ಇಲ್ಲದೆ ಗಬ್ಬೆದ್ದು ನಾರುತ್ತಿರುವುದು ಇಲ್ಲಿಗೆ ಭೇಟಿ ನೀಡಿದವರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಊರಿನ ಅಶುಚಿತ್ವ, ಮೂಲಸೌಕರ್ಯದ ಕೊರತೆ ನೋಡಿದಾಗ ಸ್ಥಳೀಯ ಆಡಳಿತ ಸಂಸ್ಥೆಗಳು ಏನು ಮಾಡುತ್ತಿವೆ? ಅಧಿಕಾರಿಗಳಿಗಾಗಲೀ, ಜನಪ್ರತಿನಿಧಿಗಳಿಗಾಗಲೀ ಇಲ್ಲಿನ ಸಮಸ್ಯೆ ಕಾಣಿಸುತ್ತಿಲ್ವ ಎಂಬ ಪ್ರಶ್ನೆಗಳು ಮೂಡುತ್ತಿವೆ.
ಚುಂಚನಕಟ್ಟೆ ಇತಿಹಾಸ, ಸ್ಥಳದ ಮಹತ್ವ ಮತ್ತು ನಿಸರ್ಗ ಸೌಂದರ್ಯದ ಬಗ್ಗೆ ಅರಿತು ಹತ್ತಿರದಿಂದ ನೋಡುವ ಖುಷಿಯಲ್ಲಿ ತೆರಳಿದರೆ ಅಲ್ಲಿನ ದುಸ್ಥಿತಿ ಕಣ್ಣಿಗೆ ರಾಚುತ್ತದೆ. ಇನ್ನು ಗ್ರಾಮದೊಳಗೆ ಹೋಗಿ ಜನರನ್ನು ಮಾತನಾಡಿಸಿದರೆ ಸಮಸ್ಯೆಗಳ ಸರಮಾಲೆಯನ್ನೇ ಬಿಚ್ಚಿಡುತ್ತಾರೆ. ಒಂದು ಪ್ರಸಿದ್ಧ ಸ್ಥಳಕ್ಕೆ ಇಂತಹ ಪರಿಸ್ಥಿತಿ ಬಂದಿರುವುದು ಬೇಸರದ ಸಂಗತಿಯಾಗಿದೆ. ಇನ್ನು ಇಲ್ಲಿಗೆ ತೆರಳಿ ಕಣ್ಣು ಹಾಯಿಸಿದರೆ ರಸ್ತೆಯಲ್ಲೇ ಹರಿಯುವ ನೀರು, ಕೆಟ್ಟು ನಿಂತ ಕೈ ಪಂಪುಗಳು, ದುಸ್ಥಿತಿಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್, ಸ್ವಚ್ಛತೆ ಕಾಣದ ಚರಂಡಿಗಳು, ವೃತ್ತ ಹಾಗೂ ರಸ್ತೆಗಳಲ್ಲಿ ಗಬ್ಬೆದ್ದು ನಾರುತ್ತಿರುವ ಕಸದ ರಾಶಿ ಸ್ವಾಗತಿಸುತ್ತದೆ.
ಮೇಲ್ನೋಟಕ್ಕೆ ಪ್ರವಾಸಿಗರು ಆಗಮಿಸುವ ಸ್ಥಳಗಳಲ್ಲಿ ಅಭಿವೃದ್ಧಿ ಮಾಡಿರುವುದು ಕಂಡು ಬಂದರೂ ಇಲ್ಲಿ ವಾಸಿಸುವ ಗ್ರಾಮಸ್ಥರ ಬದುಕು ಮಾತ್ರ ಮೂರಾಬಟ್ಟೆಯಾಗಿದೆ. ಗ್ರಾಮದಲ್ಲಿ ಸ್ವಚ್ಛತೆ ಮಾಯವಾಗಿ ಕಸದ ರಾಶಿ ಮೇಳೈಸುತ್ತಿದೆ. ಇದರಿಂದ ಹೊರ ಬರುವ ದುರ್ವಾಸನೆ ಗ್ರಾಮದಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗುತ್ತಿಲ್ಲ ಎಂಬುದನ್ನು ಮನದಟ್ಟು ಮಾಡುತ್ತಿದೆ. ಮುಖ್ಯ ರಸ್ತೆ, ಬದಿಗಳಲ್ಲೇ ಕಸದ ರಾಶಿ ಬಿದ್ದಿದ್ದರೂ ಅದನ್ನು ವಿಲೇವಾರಿ ಮಾಡುತ್ತಿಲ್ಲ. ಅದಕ್ಕಿಂತ ಹೆಚ್ಚಾಗಿ ಅಂಗಡಿ ಮುಂಗಟ್ಟು ಹಾಗೂ ಹೋಟೆಲ್‌ಗಳಿಂದ ತಂದು ತ್ಯಾಜ್ಯ ಸುರಿಯುವುದನ್ನು ತಡೆಯದ ಕಾರಣ ತ್ಯಾಜ್ಯದ ರಾಶಿಗಳು ಹೆಚ್ಚಾಗುತ್ತಿವೆ.












Click it and Unblock the Notifications