ಗ್ರಾಮವಾಸ್ತವ್ಯ ಕನಿಷ್ಠ ವೆಚ್ಚದ ಕಾರ್ಯಕ್ರಮ: ಕುಮಾರಸ್ವಾಮಿ ಸ್ಪಷ್ಟನೆ
ರಾಯಚೂರು, ಜೂನ್ 26: ಕೋಟ್ಯಂತರ ಹಣವನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂಬ ವಿರೋಧಿಗಳ ದೂರಿಗೆ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು ನನ್ನ ಗ್ರಾಮವಾಸ್ತವ್ಯ ಅತ್ಯಂತ ಕನಿಷ್ಠ ವೆಚ್ಚದ ಕಾರ್ಯಕ್ರಮ ಎಂದು ಹೇಳಿದ್ದಾರೆ.
ರಾಯಚೂರಿನ ಮಾನ್ವಿ ತಾಲ್ಲೂಕಿನ ಕರೆಗುಡ್ಡದಲ್ಲಿ ಗ್ರಾಮ ವಾಸ್ತವ್ಯದಲ್ಲಿರುವ ಅವರು, ನನ್ನ ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಡಳಿತ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳುಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲು ನಿಯಮಾವಳಿಗಳಂತೆ ವ್ಯವಸ್ಥೆ ಮಾಡಿರುತ್ತಾರೆ. ಈ ವೆಚ್ಚವನ್ನು ಗ್ರಾಮವಾಸ್ತವ್ಯಕ್ಕೆ ಜೋಡಣೆ ಮಾಡುವುದು ಸರಿಯಲ್ಲ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಗ್ರಾಮವಾಸ್ತವ್ಯಕ್ಕೆ ಸಂಬಂಧಿಸಿದಂತೆ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ ಎಂಬ ಆರೋಪಗಳಿಗೆ ಸ್ಪಷ್ಟೀಕರಣ ನೀಡಿರುವ ಮುಖ್ಯಮಂತ್ರಿಗಳು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಜನತಾದರ್ಶನ ನಡೆಸಲು ಜನರ ಅನುಕೂಲಕ್ಕಾಗಿ ವೇದಿಕೆ, ಆಸನಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ವ್ಯವಸ್ಥೆ ಮಾಡಲಾಗಿರುತ್ತದೆ ಎಂದರು.

ಗ್ರಾಮವಾಸ್ತವ್ಯ ಇಲ್ಲದಿದ್ದರೂ ಶಿಷ್ಟಾಚಾರದ ಪ್ರಕಾರ ಕ್ರಮ ಜರುಗಿಸುತ್ತಾರೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ನಡೆಸಿಕೊಂಡು ಬಂದಿರುವ ಮತ್ತು ಹಿಂದಿನ ಮುಖ್ಯಮಂತ್ರಿಗಳು ನಡೆಸಿಕೊಂಡು ಬಂದ ಪರಂಪರೆ ಎಂದು ಅವರು ವಿವರಿಸಿದ್ದಾರೆ.
ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಶಾಲೆಯಲ್ಲಿ ನಿದ್ರಿಸಲು ಕನಿಷ್ಠ ಸೌಲಭ್ಯ, ಶಾಲೆಗೆ ಅನುಕೂಲವಾಗುವಂತೆ ಶೌಚಾಲಯ ನಿರ್ಮಿಸುವಂತೆ ಸೂಚಿಸಿದ್ದಾಗಿ ಅವರು ತಿಳಿಸಿದ್ದಾರೆ.












Click it and Unblock the Notifications