ರಾಮನಗರ: ಕೊರೊನಾ ವೈರಸ್ ಸೋಂಕು ಗೆದ್ದ 11 ಜನರಿಗೆ ಪುಷ್ಪವೃಷ್ಟಿ

ರಾಮನಗರ, ಜೂನ್ 26: ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಗೊಂಡ 11 ಜನರನ್ನು ಜಿಲ್ಲಾಡಳಿತದ ವತಿಯಿಂದ "ಹೂಮಳೆ' ಸುರಿಸಿ ಶುಭ ಕೋರಿ ಕಳುಹಿಸಿಕೊಡಲಾಯಿತು.

ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾದವರನ್ನು ಹೃತ್ಪೂರ್ವಕವಾಗಿ ಬೀಳ್ಕೊಟ್ಟರು.

ರಾಮನಗರ ತಾಲ್ಲೂಕಿನ 4 ಜನ ಹಾಗೂ ಚನ್ನಪಟ್ಟಣ ತಾಲ್ಲೂಕಿನ 7 ಜನ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 17 ಜನ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಚನ್ನಪಟ್ಟಣದಲ್ಲಿ-9 ಮಂದಿ, ರಾಮನಗರದಲ್ಲಿ-6 ಮಂದಿ ಹಾಗೂ ಮಾಗಡಿಯ -2 ಜನ ಸೇರಿದಂತೆ 17 ಮಂದಿ ಕೊರೊನಾ ವೈರಸ್ ವಿರುದ್ಧ ಹೋರಾಡಿ ಜಯಿಸಿದ್ದಾರೆ.

Ramanagara: 11 People Discharged From Covid-19 Hospital

ಇದುವರೆಗೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ-55, ಮಾಗಡಿ ತಾಲೂಕಿನಲ್ಲಿ-39, ಚನ್ನಪಟ್ಟಣದಲ್ಲಿ-29 ಮತ್ತು ರಾಮನಗರದಲ್ಲಿ-26 ಪ್ರಕರಣಗಳು ದಾಖಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 147 ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಗುರುವಾರ ವರದಿಯ ಅನ್ವಯ ಜಿಲ್ಲೆಯಲ್ಲಿ 147 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 17 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೆ, 4 ಮಂದಿ ಮೃತಪಟ್ಟಿದ್ದಾರೆ ಹಾಗೂ ಇನ್ನೂ 126 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 8025 ಮಂದಿ, 28 ದಿನಗಳ ನಿಗಾ ಅವಧಿ ಪೂರೈಸಿದವರು 2978 ಜನರು, 14 ದಿನಗಳ ನಿಗಾ ಅವಧಿ ಪೂರೈಸಿದವರು 2125 ಮಂದಿ ಹಾಗೂ 2248 ಮಂದಿ ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 8330 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಗುರುವಾರ 176 ಮಾದರಿಗಳು ನಕಾರಾತ್ಮಕವಾಗಿವೆ. ಇದುವರೆಗೆ ಒಟ್ಟು 7148 ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿರುತ್ತದೆ. ಒಟ್ಟು 3063 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ‌ ಆರೋಗ್ಯ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+