ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನಕಪುರ, ಮಾಗಡಿ ಸ್ಥಳೀಯ ಸಂಸ್ಥೆ ಚುನಾವಣೆ; ಅಂತಿಮವಾಗಿ 117 ಮಂದಿ ಕಣದಲ್ಲಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ನವೆಂಬರ್ 11: ಜಿಲ್ಲೆಯಲ್ಲಿ ಒಂದು ಪುರಸಭೆ ಮತ್ತು ಒಂದು ನಗರಸಭೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಎರಡು ಕ್ಷೇತ್ರಗಳ ಸ್ಥಾನಗಳಿಗೆ ಅಂತಿಮವಾಗಿ 117 ಸ್ಪರ್ಧಿಗಳು ಚುನಾವಣೆ ಕಣದಲ್ಲಿದ್ದಾರೆ.

ಕನಕಪುರ ನಗರಸಭೆ ಒಟ್ಟು 31 ವಾರ್ಡ್ ಗಳನ್ನು ಹೊಂದಿದ್ದು ಈಗಾಗಲೇ ಕಾಂಗ್ರೆಸ್ ಪಕ್ಷದ 7 ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 24 ವಾರ್ಡ್ ಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು ಅದರ ಅನ್ವಯ 20 ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿಗಳು 4 ವಾರ್ಡ್ ಗಳಲ್ಲಿ ಸ್ಪರ್ಧೆ ಮಾಡಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್‌ಗೆ ದೇವೇಗೌಡರ ಕಿವಿಮಾತುಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್‌ಗೆ ದೇವೇಗೌಡರ ಕಿವಿಮಾತು

ಅಂತೆಯೇ ಬಿಎಸ್ಪಿ ಪಕ್ಷದ ಅಭ್ಯರ್ಥಿಗಳು 4 ವಾರ್ಡ್ ಗಳಲ್ಲಿ ಸ್ಪರ್ಧಿಸಿದ್ದಾರೆ. ಬಿಜೆಪಿ ವತಿಯಿಂದ 23 ವಾರ್ಡ್ ಗಳಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ. 16 ಮಂದಿ ಪಕ್ಷೇತರರು ಚುನಾವಾಣೆ ಕಣದಲ್ಲಿದ್ದಾರೆ.

117 Candidates In Kanakapur And Magadi Local Body Election

ಮಾಗಡಿ ಪುರಸಭೆಯ 23 ವಾರ್ಡ್ ಗಳಿಗೆ ಚುನಾವಣೆ ನಡೆಯುತ್ತಿದ್ದು ಮೂರು ಪಕ್ಷದ ಅಭ್ಯರ್ಥಿಗಳು ಎಲ್ಲಾ ವಾರ್ಡ್ ಗಳಲ್ಲಿ ಸ್ಪರ್ಧೆ ಮಾಡಿದ್ದಾರೆ. ಜೊತೆಗೆ ಪಕ್ಷೇತರರು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಅಂತಿಮವಾಗಿ ಚುನಾವಣೆ ಕಣದಲ್ಲಿ 74 ಮಂದಿ ಸ್ಪರ್ಧಿಗಳಿದ್ದಾರೆ.

117 Candidates In Kanakapur And Magadi Local Body Election

 ದಾವಣಗೆರೆಯಲ್ಲಿ ಪಾಲಿಕೆ ಮತದಾನಕ್ಕೆ ಭರದ ಸಿದ್ಧತೆ ದಾವಣಗೆರೆಯಲ್ಲಿ ಪಾಲಿಕೆ ಮತದಾನಕ್ಕೆ ಭರದ ಸಿದ್ಧತೆ

ಕಾಂಗ್ರೆಸ್‌ ಪಕ್ಷದ 23 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಜೆಡಿಎಸ್ ಪಕ್ಷದಿಂದ 23 ಮಂದಿ ಹಾಗೂ ಬಿಜೆಪಿ ಪಕ್ಷದಿಂದಲೂ 23 ಮಂದಿ ಸ್ಪರ್ಧಿಸಿದ್ದಾರೆ. ಇನ್ನು ಪಕ್ಷೇತರರು 5 ವಾರ್ಡ್ ಗಳಲ್ಲಿ ಸ್ಪರ್ಧೆ ಮಾಡಿದ್ದು, ಎಲ್ಲ ಅಭ್ಯರ್ಥಿಗಳ ಹಣೆಬರಹವನ್ನು ಮತದಾರ ನಾಳಿನ ಮತದಾನದಲ್ಲಿ ಬರೆಯಲಿದ್ದಾನೆ. ಇನ್ನು ಶ್ಯಾನುಬೋಗನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಪ್ಪೆಮರದೊಡ್ಡಿ ಕ್ಷೇತ್ರಕ್ಕೂ ನಾಳೆ ಚುನಾವಣೆ ನಡೆಯಲಿದೆ. ಸ್ಥಳೀಯ ಸಂಸ್ಥೆಯ ಚುನಾವಣಾ ವ್ಯಾಪ್ತಿಯಲ್ಲಿ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ವಿದ್ಯಾಸಂಸ್ಥೆಗಳು, ಶಾಲಾ ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಉದ್ಯಮಗಳಿಗೆ ಸರ್ಕಾರ 1881ರ ಕಾಯಿದೆ ಪ್ರಕಾರ ಸಾರ್ವಜನಿಕ ರಜೆ ಘೋಷಿಸಿದೆ.

English summary
117 candidates are competiting in kanakapur and magadi local body election
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X