• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರ: ಒಂದೇ ದಿನ 12 ಮಂದಿಗೆ ಕೊರೊನಾ ವೈರಸ್ ಸೋಂಕು

By ರಾಮನಗರ ಪ್ರತಿನಿಧಿ
|

ರಾಮನಗರ, ಜೂನ್ 17: ರಾಮನಗರ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ ಬರೋಬ್ಬರಿ 12 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

   Virat , sachin and kapil are now also the names of streets in Melbourne | Oneindia Kannada

   ರಾಮನಗರದ ಬಿಡದಿಯಲ್ಲಿ ಎರಡು ಕೊರೊನಾ ವೈರಸ್ ಸೋಂಕು ಮತ್ತು ಚನ್ನಪಟ್ಟಣದಲ್ಲಿ 10 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೊರೊನಾ ವೈರಸ್ ಸೋಂಕಿತರ ಟ್ರಾವೆಲ್ ಇತಿಹಾಸವನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.

   ರಾಮನಗರದಲ್ಲಿ ಕೊರೊನಾ ವೈರಸ್ ಗೆ 2ನೇ ಬಲಿ; ಟೊಯೊಟಾ ಕಂಪನಿ ಸಿಬ್ಬಂದಿಗೂ ಸೋಂಕು‌

   ರಾಮನಗರ ತಾಲ್ಲೂಕಿನ ಬಿಡದಿಯ ಟೊಯೊಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಅದರಲ್ಲಿ ಮಂಡ್ಯದ ಓರ್ವ ವ್ಯಕ್ತಿ ಹಾಗೂ ಬೆಂಗಳೂರಿನ ಆಡುಗೋಡಿಯ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿದೆ.

   ಅದೇ ರೀತಿ ಚನ್ನಪಟ್ಟಣದಲ್ಲಿ 10 ಜನರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ತಾಲೂಕಿನ ಶ್ಯಾನುಭೋಗನಹಳ್ಳಿ ಗ್ರಾಮದ 7 ಜನ ಹಾಗೂ ದೇವರಹೊಸಹಳ್ಳಿ ಗ್ರಾಮದ 3 ಜನರಿಗೆ ಸೋಂಕು ಪಾಸಿಟಿವ್ ಬಂದಿದೆ.

   P-4337 ಸಂಪರ್ಕದಲ್ಲಿದ್ದ 7 ಮಂದಿಗೆ ಸೋಂಕು ದೃಢಪಟ್ಟಿದ್ದು, P-4337 ಸಂಪರ್ಕದಲ್ಲಿದ್ದ 24 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ನಲ್ಲಿದ್ದ 7 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

   ದೇವರಹೊಸಹಳ್ಳಿಯ P- 6856 ರ ತಾಯಿ ಹಾಗೂ ಇಬ್ಬರು ಸಹೋದರರಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಬಂದಿದ್ದು, ಎಲ್ಲಾ ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದಿನ ವರದಿಯಿಂದ ರಾಮನಗರ ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 37 ಕ್ಕೆ ಏರಿಕೆಯಾಗಿದೆ.

   English summary
   Coronavirus infection Detected in 12 people at Ramanagara district on Wednesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X