ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಯ ವೈದ್ಯ ಹಾಗೂ 3 ಸಿಬ್ಬಂದಿಗೆ ಕೊರೊನಾ ಸೋಂಕು
ರಾಮನಗರ, ಜುಲೈ 19: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ 3 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ಸರ್ಕಾರಿ ಆಸ್ಪತ್ರೆಯನ್ನು 2 ದಿನ ಸೀಲ್ ಡೌನ್ ಮಾಡಲಾಗಿದೆ.
Recommended Video
ಸರ್ಕಾರಿ ಆಸ್ಪತ್ರೆ ಓರ್ವ ವೈದ್ಯ ಹಾಗೂ 3 ಜನ ಸಿಬ್ಬಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಆಸ್ಪತ್ರೆಯ ಖ್ಯಾತ ವೈದ್ಯ, ಆಸ್ಪತ್ರೆಯ ಆ್ಯಂಬುಲೆನ್ಸ್ ಡ್ರೈವರ್, ಡಾಟಾ ಎಂಟ್ರಿಯ ಓರ್ವ ಹಾಗೂ ಕ್ಲರ್ಕ್ ಗೆ ಕೊರೊನಾ ಸೋಂಕು ಧೃಡಪಟ್ಟಿದೆ.
ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯನ್ನು ಶನಿವಾರ ಮತ್ತು ಭಾನುವಾರ ಸೀಲ್ ಡೌನ್ ಮಾಡಿದ್ದು, ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸರ್ ಮಾಡಿ ಸೋಮವಾರದಿಂದ ಎಂದಿನಂತೆ ಆಸ್ಪತ್ರೆ ಕಾರ್ಯನಿರ್ವಹಿಸಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಶನಿವಾರ 14 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಚನ್ನಪಟ್ಟಣ- 3, ಮಾಗಡಿ- 5, ಕನಕಪುರ-5 ಹಾಗೂ ರಾಮನಗರ -1 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಿಲ್ಲೆಯಲ್ಲಿ ಶನಿವಾರ 30 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 428 ಕ್ಕೆ ಏರಿಕೆಯಾಗಿದೆ.












Click it and Unblock the Notifications