ರಾಮನಗರ ಜಿಲ್ಲೆಯಲ್ಲಿ ಇಂದು 17 ಕೊರೊನಾ ವೈರಸ್ ಪತ್ತೆ, 1 ಸಾವು
ರಾಮನಗರ, ಜುಲೈ 9: ರಾಮನಗರ ಜಿಲ್ಲೆಯಲ್ಲಿ ಇಂದು 17 ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.
Recommended Video
ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 8 ಕ್ಕೆ ಏರಿಕೆಯಾರಿದ್ದು, ಕೋವಿಡ್-19 ಸೋಂಕಿತರ ಸಂಖ್ಯೆ 332 ಕ್ಕೆ ಏರಿಕೆಯಾಗಿದೆ. ಇಂದಿನ ಸೋಂಕಿತರನ್ನು ಕೋವಿಡ್-19 ಅಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಮಾಗಡಿ ತಾಲ್ಲೂಕಿನ 48 ವರ್ಷದ ವ್ಯಕ್ತಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಇಂದು 17 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ತ್ರಿಶತಕದ ಗಡಿ ದಾಟಿದೆ.

ಇಂದಿನ 17 ಸೋಂಕಿತರು ಸೇರಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 332 ಕ್ಕೆ ಏರಿಕೆಯಾಗಿದೆ. ಮಾಗಡಿಯಲ್ಲಿ-2, ರಾಮನಗರದಲ್ಲಿ-14 ಹಾಗೂ ಚನ್ನಪಟ್ಟಣದಲ್ಲಿ-1 ಕೋವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಇನ್ನು ಜಿಲ್ಲೆಯಲ್ಲಿ 12 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 157 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications