ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ ಜಿಲ್ಲೆಯಲ್ಲಿ ಇಂದು 17 ಕೊರೊನಾ ವೈರಸ್ ಪತ್ತೆ, 1 ಸಾವು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜುಲೈ 9: ರಾಮನಗರ ಜಿಲ್ಲೆಯಲ್ಲಿ ಇಂದು 17 ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.

Recommended Video

WHO ಹಾಡಿ ಹೊಗಳಿದ ಚೀನಾ | Oneindia Kannada

ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 8 ಕ್ಕೆ ಏರಿಕೆಯಾರಿದ್ದು, ಕೋವಿಡ್-19 ಸೋಂಕಿತರ ಸಂಖ್ಯೆ 332 ಕ್ಕೆ ಏರಿಕೆಯಾಗಿದೆ. ಇಂದಿನ ಸೋಂಕಿತರನ್ನು ಕೋವಿಡ್-19 ಅಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಬಲಿಗನ ಬರ್ತ್ ಡೇ ಆಚರಿಸಿದ ಮಾಗಡಿ ಶಾಸಕ ಎ.ಮಂಜುನಾಥ್ ವಿರುದ್ಧ ವ್ಯಾಪಕ ಟೀಕೆಬೆಂಬಲಿಗನ ಬರ್ತ್ ಡೇ ಆಚರಿಸಿದ ಮಾಗಡಿ ಶಾಸಕ ಎ.ಮಂಜುನಾಥ್ ವಿರುದ್ಧ ವ್ಯಾಪಕ ಟೀಕೆ

ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಮಾಗಡಿ ತಾಲ್ಲೂಕಿನ‌ 48 ವರ್ಷದ ವ್ಯಕ್ತಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಇಂದು 17 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ತ್ರಿಶತಕದ ಗಡಿ ದಾಟಿದೆ.

17 New Coronavirus Infection Case Reported In Ramanagara

ಇಂದಿನ 17 ಸೋಂಕಿತರು ಸೇರಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 332 ಕ್ಕೆ ಏರಿಕೆಯಾಗಿದೆ. ಮಾಗಡಿಯಲ್ಲಿ-2, ರಾಮನಗರದಲ್ಲಿ-14 ಹಾಗೂ ಚನ್ನಪಟ್ಟಣದಲ್ಲಿ-1 ಕೋವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾ ವೈರಸ್ ಭೀತಿಗೆ ರಾಮನಗರ ಜಿಲ್ಲಾ ಎಸ್ಪಿ ಕಚೇರಿ ಸೀಲ್ ಡೌನ್ಕೊರೊನಾ ವೈರಸ್ ಭೀತಿಗೆ ರಾಮನಗರ ಜಿಲ್ಲಾ ಎಸ್ಪಿ ಕಚೇರಿ ಸೀಲ್ ಡೌನ್

ಇನ್ನು ಜಿಲ್ಲೆಯಲ್ಲಿ 12 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 157 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

English summary
17 New Coronavirus cases has been found in Ramanagara district today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X