ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2023ರ ಚುನಾವಣೆ; ಸಂಕ್ರಾಂತಿಗೆ ಜೆಡಿಎಸ್‌ ಮೊದಲ ಪಟ್ಟಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 28: "ಜನವರಿ ತಿಂಗಳ ಸಂಕ್ರಾಂತಿ ದಿನವೇ 2023ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದರು.

ಜನತಾ ಪರ್ವ 1.O ಹಾಗೂ ಮಿಷನ್ 123 ಹೆಸರಿನಲ್ಲಿ ಬಿಡದಿಯ ತಮ್ಮ ತೋಟದಲ್ಲಿ ಹ್ಮಮಿಕೊಂಡಿದ್ದ 4 ದಿನಗಳ ಕಾರ್ಯಗಾರದ 2ನೇ ದಿನದ ಕೊನೆಯಲ್ಲಿ ಮಾಧ್ಯಮಗಳೊಂದಿಗೆ ಕುಮಾರಸ್ವಾಮಿ ಮಾತನಾಡಿದರು.

ಪ್ರಾದೇಶಿಕ ಪಕ್ಷಕ್ಕೆ ಹೈಕಮಾಂಡ್ ಹಂಗಿಲ್ಲ; ಎಚ್‌ಡಿಕೆ ಪ್ರಾದೇಶಿಕ ಪಕ್ಷಕ್ಕೆ ಹೈಕಮಾಂಡ್ ಹಂಗಿಲ್ಲ; ಎಚ್‌ಡಿಕೆ

"ಇಂದಿನ ಕಾರ್ಯಾಗಾರದಲ್ಲಿ ಮುಂದಿನ ಅಭ್ಯರ್ಥಿಗಳಿಗೆ 30 ಅಂಶಗಳ ಅಜೆಂಡಾ ನೀಡಿದ್ದೇವೆ. ಆ ಅಜೆಂಡಾ ಪ್ರಕಾರ ಅವರು ಕೆಲಸ ಮಾಡಿ ತೋರಿಸಬೇಕು. ಅವರೆಲ್ಲರೂ 3 ತಿಂಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನ ಮಾಡಬೇಕು‌. ಯಶಸ್ವಿಯಾಗಿ ಅನುಷ್ಠಾನ ಮಾಡುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಾಗುವುದು" ಎಂದರು.

ಜೆಡಿಎಸ್ 30 ಸೀಟಿನ ಪಕ್ಷ ಎಂದವರಿಗೆ ಎಚ್‌ಡಿಕೆ ತಿರುಗೇಟು! ಜೆಡಿಎಸ್ 30 ಸೀಟಿನ ಪಕ್ಷ ಎಂದವರಿಗೆ ಎಚ್‌ಡಿಕೆ ತಿರುಗೇಟು!

 2023 Assembly Elections JDS Candidate 1st List On 2022 Sankranti

"ನಿಗದಿತ ಅವಧಿಯೊಳಗೆ ಈ ಅಜೆಂಡಾವನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅನುಷ್ಠಾನ ಮಾಡಲೆಬೇಕು ಹಾಗೂ ಇದನ್ನು ಪರಿವೀಕ್ಷಣೆ ಮಾಡಲು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಪ್ರತಿನಿತ್ಯ ಇದರ ಬಗ್ಗೆ ಮಾಹಿತಿ ಪಡೆಯುತ್ತೇನೆ" ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ಜೆಡಿಎಸ್ ಮುಗಿಸಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ: ದೇವೇಗೌಡರ ಗುಡುಗುಜೆಡಿಎಸ್ ಮುಗಿಸಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ: ದೇವೇಗೌಡರ ಗುಡುಗು

"ಒಂದು ವೇಳೆ ಈ 30 ಅಂಶಗಳ ಕಾರ್ಯಕ್ರಮ ಅನುಷ್ಠಾನ ಮಾಡದಿದ್ದರೆ ಅಂತಹ ಅಭ್ಯರ್ಥಿಗಳ ಹೆಸರುಗಳನ್ನು ತಡೆ ಹಿಡಿಯುತ್ತೇವೆ. ಅಲ್ಲಿ ಮತ್ತೊಬ್ಬರನ್ನು ಹಾಕುತ್ತೇವೆ. ಇದರಲ್ಲಿ ಯಾವುದೇ ರಾಜಿ ಇಲ್ಲ" ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಬಿಜೆಪಿಗೆ ಬದ್ದತೆ ಇಲ್ಲ; "ಮೇಕೆದಾಟು ಸೇರಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸರಕಾರಕ್ಕೆ ಹಾಗೂ ಬಿಜೆಪಿಗೆ ಯಾವ ಬದ್ಧತೆಯೂ ಇಲ್ಲ. ಹೊಸ ಮುಖ್ಯಮಂತ್ರಿಗೆ ಕೂಡ ಬದ್ಧತೆ ಇಲ್ಲ. ಮೇಕೆದಾಟು ಯೋಜನೆ ಕೇಂದ್ರ ಸರಕಾರದ ಮುಂದೆಯೇ ಇಲ್ಲ. ರಾಜ್ಯ ರಾಜ್ಯಗಳ ನಡುವೆ ಬಿಕ್ಕಟ್ಟಿದೆ ಎನ್ನುವ ಕಾರಣಕ್ಕೆ ಕೇಂದ್ರ ಹಿಂಜರಿಯುತ್ತಿದೆ" ಎಂದು ಕುಮಾರಸ್ವಾಮಿ ಆರೋಪ ಮಾಡಿದರು.

"ನೀರಾವರಿ ಯೋಜನೆಗಳ ಬಗ್ಗೆ ಜೆಡಿಎಸ್ ಹೋರಾಟ ಮಾಡಲಿದೆ. ಮುಂಬರುವ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸುತ್ತೇವೆ. ಕೇಂದ್ರ ಸರ್ಕಾರದ ವಿರುದ್ದವೂ ಹೋರಾಟ ಮಾಡುತ್ತೇವೆ. ಭಾಷೆ, ನೆಲ, ನೀರಿನ ವಿಚಾರದಲ್ಲಿ ನಾಡಿನ ಹಿತ ಕಾಪಾಡಲು ಜೆಡಿಎಸ್ ಕೆಲಸ ಮಾಡುತ್ತದೆ" ಎಂದು ಕುಮಾರಸ್ವಾಮಿ ಹೇಳಿದರು.

"ರಾಜ್ಯದಲ್ಲಿ ಜನರು ಎರಡು ರಾಷ್ಟ್ರೀಯ ಪಕ್ಷಗಳನ್ನು ‌ನೋಡಿದ್ದಾರೆ. ಹೀಗಾಗಿ ಅವರ ವರ್ತನೆಗಳು ಏನು ಅನ್ನುವುದು ಗೊತ್ತಿದೆ. ಹೀಗಾಗಿ ಈ ಬಾರಿ ಜನ ನಮ್ಮ ಜೊತೆ ಇರುತ್ತಾರೆ ಎನ್ನುವ ವಿಶ್ವಾಸ ಇದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು" ಎಂದರು ಭರವಸೆ ನೀಡಿದರು.

ಪಂಚರತ್ನ ಯೋಜನೆ; ಮಂಗಳವಾರ ಎಚ್. ಡಿ. ಕುಮಾರಸ್ವಾಮಿ ಪಂಚರತ್ನ ಯೋಜನೆ ಘೋಷಣೆ ಮಾಡಿದರು. ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ಮತ್ತು ವಸತಿ ಈ ಯೋಜನೆಯಲ್ಲಿ ಸೇರಿವೆ. ಈ ವಲಯಗಳಿಗೆ ವಿಶೇಷ ಯೋಜನೆ ನೀಡುತ್ತೇವೆ. ಈ ಬಗ್ಗೆ ನನ್ನ ಪರಿಕಲ್ಪನೆಯ ಕಾರ್ಯಕ್ರಮಗಳು ಜಾರಿ ಆಗುತ್ತವೆ. ಈ ಎಲ್ಲ ಸಂಗತಿಗಳನ್ನು ಜನರಿಗೆ ಮನದಟ್ಟು ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು, ಸಮಸ್ಯೆ ಪರಿಹಾರ ನೀಡುವ ಕೆಲಸ ಮಾಡುತ್ತೇವೆ. ವಿಧವಾ ವೇತನ, ಹಿರಿಯ ನಾಗರೀಕರು, ಯುವಕ ಸಮಸ್ಯೆಗೆ ಬೇಕಾದ ಹಲವು ಯೋಜನೆ ಪ್ರಾರಂಭಿಸುತ್ತೇವೆ. ಮುಂದಿನ 17 ತಿಂಗಳು ಈ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ ಎಂದರು.

ಪಂಚರತ್ನ ಯೋಜನೆ ವಿವರ

1. 'ವಸತಿ ಆಸರೆ' ವಸತಿ ಇಲ್ಲದ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಉಚಿತವಾಗಿ ವಸತಿ ನೀಡುವುದು.

2. 'ಶಿಕ್ಷಣವೇ ಆಧುನಿಕ ಶಕ್ತಿ' ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವ ಯೋಜನೆ.

3. 'ಆರೋಗ್ಯ ‌ಸಂಪತ್ತು' ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 24×7 ಕಾರ್ಯ ನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ.

4. 'ರೈತ ಚೈತನ್ಯ' ಆಧುನಿಕ ತಂತ್ರಜ್ಞಾನದ ಕೃಷಿ ಪದ್ದತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣಾ ವ್ಯವಸ್ಥೆ ಹಾಗೂ ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ.

5. 'ಯುವ ನವ ಮಾರ್ಗ ಹಾಗೂ ಮಹಿಳಾ ಸಬಲೀಕರಣ' ಯುವ ಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ.

ಜನತಾ ಪರ್ವ; "ಇವತ್ತು ನಾನು ನಮ್ಮ ಪಕ್ಷಕ್ಕಾಗಿ ಶಿಕ್ಷಕ ಆಗಿದ್ದೆ. ನಮ್ಮ ಶಾಸಕರು, ಮುಂದಿನ ಚುನಾವಣೆಯ ಅಭ್ಯರ್ಥಿಗಳಿಗೆ ಪಾಠ ಮಾಡಿದ್ದು ವಿಶೇಷ ಅನುಭವ. ಅಲ್ಲದೆ, ಇಂದಿನ ಪಿಪಿಟಿ ಪ್ಲ್ಯಾನ್ ಕೂಡಾ ನನ್ನದೇ, ಕಂಟೆಂಟ್ ಕೂಡ ನನ್ನದೇ" ಎಂದು ಕುಮಾರಸ್ವಾಮಿ ಹೇಳಿದರು.

Recommended Video

ಜಾರ್ಜ್ ಗಾರ್ಟನ್ ಈ ಬಾರಿ RCB ಒಂದು ಪಂದ್ಯವನ್ನಾದರೂ ಆಡ್ತಾರಾ | Oneindia Kannada

"ಕಾಲೇಜು ದಿನಗಳಲ್ಲಿ ನಾನು ಕೊನೆ ಬೇಂಚ್ ವಿದ್ಯಾರ್ಥಿ ಆಗಿದ್ದೆ. ಇಂದು ಅಭ್ಯರ್ಥಿಗಳಿಗೆ ಪಕ್ಷದ ವಿಚಾರಗಳು ತಿಳಿಸಲು ವಿದ್ಯಾರ್ಥಿ ಆಗೋಕ್ಕಿಂತ ಶಿಕ್ಷಕನಂತೆ ಆಗಿ ಶಾಸಕರಿಗೆ ತಿಳಿ ಹೇಳಿದ್ದೇನೆ. ಅಭ್ಯರ್ಥಿಗಳು ಶಿಸ್ತಿನ ವಿದ್ಯಾರ್ಥಿಗಳಾಗಿ ಕುಳಿತು ಕೇಳಿದ್ದಾರೆ. ಇಡೀ ಕಾರ್ಯಾಗಾರದ ಸಂಪೂರ್ಣ ಪರಿಕಲ್ಪನೆ ನನ್ನದೇ" ಎಂದು ಕುಮಾರಸ್ವಾಮಿ ತಿಳಿಸಿದರು.

English summary
Former chief minister H. D. Kumaraswamy said that party candidates 1st list for 2023 assembly elections will be announced on 2022 Sankranti.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X