2023ರಲ್ಲಿ ಅಧಿಕಾರ ಗದ್ದುಗೆಗಾಗಿ ಜೆಡಿಎಸ್ ರಣತಂತ್ರ: ಬಿಡದಿ ತೋಟದಲ್ಲಿ 4 ದಿನಗಳ ಕಾರ್ಯಾಗಾರ
ರಾಮನಗರ, ಸೆಪ್ಟೆಂಬರ್ 23: ಮುಂಬರುವ 2023ರ ವಿಧಾನಸಭೆ ಚುನಾವಣೆಯನ್ನು ಗುರಿ ಇಟ್ಟುಕೊಂಡು ರಾಜ್ಯದಲ್ಲಿ ತೃತೀಯ ಶಕ್ತಿಯಾಗಿ ಹೊರಹೊಮ್ಮಲು ಜೆಡಿಎಸ್ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆ ನಿಟ್ಟಿನಲ್ಲಿ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪಕ್ಕಾ ಕಾರ್ಯತಂತ್ರ ರೂಪಿಸುತ್ತಿದ್ದು, "ಮನೆ ಬಾಗಿಲಿಗೆ' ಪಕ್ಷದ ಕಾರ್ಯಕರ್ತರನ್ನು ಬರಮಾಡಿಕೊಂಡು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ.
ಕಾರ್ಯಕರ್ತರ ಜೊತೆ ಸಮಾಲೋಚನೆಗಾಗಿ ಬಿಡದಿಯ ಕೇತುಗಾನಹಳ್ಳಿ ಬಳಿಯಿರುವ ತೋಟದಲ್ಲಿ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದೇ ಸೆ.27, 28, 29 ಮತ್ತು 30ರಂದು ನಾಲ್ಕು ದಿನಗಳ ಕಾಲ ವಿಶೇಷ ಸಭೆಗಳನ್ನು ಮಾಜಿ ಸಿಎಂ ಎಚ್‌ಡಿಕೆ ಏರ್ಪಡಿಸಿದ್ದಾರೆ.
ರಾಜ್ಯದ ಉದ್ದಗಲಕ್ಕೂ ಇರುವ ಕಾರ್ಯಕರ್ತರಿಗೆ, ಮುಖಂಡರಿಗೆ ಚೈತನ್ಯ ತುಂಬುವುದು ಸೇರಿದಂತೆ ಪಕ್ಷವನ್ನು ಬಲಿಷ್ಠಗೊಳಿಸಲು ಎಲ್ಲಾ ತಂತ್ರಗಳನ್ನು ರೂಪಿಸಿ, ತಳಮಟ್ಟದಿಂದ ಪಕ್ಷವನ್ನು ಬಲವಾಗಿ ಮೇಲೆತ್ತಲು ಅಗತ್ಯ ಇರುವ ಎಲ್ಲಾ ಕ್ರಮಗಳ ಜತೆಗೆ, "ತಮ್ಮ ಪರಿಕಲ್ಪನೆಯಲ್ಲಿ' ಪಕ್ಷಕ್ಕೆ ಪುನಶ್ಚೇತನ ನೀಡಲು ಮಾಜಿ ಮುಖ್ಯಮಂತ್ರಿ ಸಭೆ ಹಮ್ಮಿಕೊಂಡಿದ್ದಾರೆ.

ರಾಜ್ಯವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳು ನಿರ್ಲಕ್ಷ್ಯ ಮಾಡಿವೆ. ಜೆಡಿಎಸ್ ಕನ್ನಡಿಗರ ಏಕೈಕ ಆಯ್ಕೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷದ ಮುಂದಿರುವ ಆಯ್ಕೆಗಳು ಹಾಗೂ ಸವಾಲುಗಳು, ಅವುಗಳ ಪರಿಹಾರದ ಬಗ್ಗೆಯೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಕುಮಾರಸ್ವಾಮಿ ಅಗತ್ಯ ಸೂಚನೆಗಳನ್ನು ನೀಡಲಿದ್ದಾರೆ.
ರಾಜ್ಯದ ಹಿತಾಸಕ್ತಿಗಳ ಪ್ರಶ್ನೆ ಬಂದಾಗ ರಾಷ್ಟ್ರೀಯ ಪಕ್ಷಗಳು ಇಬ್ಬಗೆಯ ನೀತಿ ತಾಳಿವೆ. ಜೆಡಿಎಸ್ ಮಾತ್ರ ಕನ್ನಡಿಗರಿಗೆ ಮಿಡಿಯುವ ಪಕ್ಷವಾಗಿದ್ದು, ಅದನ್ನು ಜನರಿಗೆ ಸಮರ್ಥವಾಗಿ ಮುಟ್ಟಿಸುವುದು ಸೇರಿ, ರಾಷ್ಟ್ರೀಯ ಪಕ್ಷಗಳು ಒಡ್ಡುವ ಸವಾಲುಗಳ ಬಗ್ಗೆ ಕೂಡ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಲ್ಕು ದಿನದ ಕಾರ್ಯಾಗಾರದಲ್ಲಿ ವಿವರವಾಗಿ ಚರ್ಚೆ ಮಾಡಲಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, "ಸದ್ಯಕ್ಕೆ ಕನ್ನಡಿಗರ ಕಷ್ಟ ಎಂದು ಬಂದಾಗ ಪ್ರತಿಯೊಂದು ವಿಷಯಕ್ಕೂ ದೆಹಲಿಯತ್ತ ನೋಡುವ ದುಸ್ಥಿತಿ ಇದೆ. ಕಾಂಗ್ರೆಸ್ ಮತ್ತು ಬಿಜೆಪಿ ದಿಲ್ಲಿ ಸಂಸ್ಕೃತಿಯಿಂದ ರಾಜ್ಯ ಹಿತವನ್ನು ನಿರಂತರವಾಗಿ ಬಲಿ ಕೊಡುತ್ತ ಬರಲಾಗಿದೆ. ಇದಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ. 2023ರಲ್ಲಿ ಕನ್ನಡಿಗರೆಲ್ಲಾ ಒಂದಾಗಿ ಪರಿಹಾರ ಕಂಡುಕೊಳ್ಳಬೇಕಾಗಿದೆ,'' ಎಂದು ಹೇಳಿದರು.

"ರಾಷ್ಟ್ರೀಯ ಪಕ್ಷಗಳು ಎಷ್ಟೇ ಪ್ರಯತ್ನ ಮಾಡಿದರೂ, ಜೆಡಿಎಸ್ ಪಕ್ಷವನ್ನು ಮುಗಿಸಲು ಸಾಧ್ಯವಾಗಿಲ್ಲ. ತುಳಿದಷ್ಟು ಅಷ್ಟೇ ಬಲವಾಗಿ ಪುಟಿದೆದ್ದು ಬರುತ್ತಿದೆ ನಮ್ಮ ಪಕ್ಷ. ಅರ್ಪಣಾ ಮನೋಭಾವದ ಕಾರ್ಯಕರ್ತರಿಂದ ಇದು ಸಾಧ್ಯವಾಗಿದೆ,'' ಎಂದು ವಿರೋಧ ಪಕ್ಷಗಳಿಗೆ ಪರೋಕ್ಷವಾಗಿ ಮಾಜಿ ಸಿಎಂ ಎಚ್‌ಡಿಕೆ ಟಾಂಗ್ ನೀಡಿದರು.
ನಾಲ್ಕು ದಿನದ ಕಾರ್ಯಗಾರದ ಪ್ರಮುಖ ಅಂಶಗಳು
1. ಮುಂದಿನ ಗುರಿ ಮತ್ತು ದಾರಿಯ ಬಗ್ಗೆ ಚರ್ಚೆ
2. ಚುನಾವಣೆ 2023ರ ಬಗ್ಗೆ ಸ್ಪಷ್ಟ ಗುರಿ ನಿಗದಿ ಮಾಡಲಿರುವ ಎಚ್.ಡಿ. ಕುಮಾರಸ್ವಾಮಿ
3. ಕಾರ್ಯಕರ್ತರ ಸಮಸ್ಯೆಗಳ ಚರ್ಚೆ
4. ಪ್ರಶ್ನೆ, ಉತ್ತರ ಮತ್ತು ಪರಿಹಾರ
5. ತಳಮಟ್ಟದಲ್ಲಿ ಪಕ್ಷ ಕಟ್ಟುವ ಬಗ್ಗೆ ಸ್ಪಷ್ಟ ದಿಕ್ಸೂಚಿ
6. ಕಾರ್ಯಕರ್ತರ ಸಮಸ್ಯೆ ಪರಿಹಾರಕ್ಕೆ ನಿರಂತರ ವ್ಯವಸ್ಥೆ
Recommended Video
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications