• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರ; ಬಟ್ಟೆ ಒಣಗಿಸುವಾಗ ವಿದ್ಯುತ್ ತಂತಿ ತುಳಿದು ಗೃಹಿಣಿ ಸಾವು

By ರಾಮನಗರ ಪ್ರತಿನಿಧಿ
|

ರಾಮನಗರ, ಜೂನ್ 12: ಮನೆಯ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ಕುಂಟನದೊಡ್ಡಿ ಗ್ರಾಮದಲ್ಲಿ ನಡೆದಿದೆ‌.

ತಾಲ್ಲೂಕಿನ ಅಕ್ಕೂರು ಹೋಬಳಿಯ ಕುಂಟನದೊಡ್ಡಿ ಗ್ರಾಮದ ಶಿವಮ್ಮ (45) ತಮ್ಮ ಮನೆಯ ಮೇಲೆ ಇಂದು ಬೆಳಿಗ್ಗೆ ಬಟ್ಟೆ ಒಣಗಿಸಲು ಹಾಕುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೈಸೂರಿನಲ್ಲಿ ಜೋಳದ ಲಾರಿಗೆ ವಿದ್ಯುತ್ ತಗುಲಿ ಮೂವರು ಕಾರ್ಮಿಕರ ದುರ್ಮರಣ

ಮನೆಯ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ರಾತ್ರಿ ಬೀಸಿದ ಬಿರುಗಾಳಿಯಿಂದ ತುಂಡಾಗಿ ಬಿದ್ದಿದೆ. ಬೆಳಿಗ್ಗೆ ಬಟ್ಟೆ ಒಣ ಹಾಕಲು ಶಿವಮ್ಮ ಹೋದಾಗ ಬಿದ್ದಿದ್ದ ತಂತಿ ತುಳಿದಿದ್ದಾರೆ. ಆಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಶಿವಮ್ಮ ಅವರಿಗೆ ಪತಿ, ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬಳು ಹೆಣ್ಣು ಮಗಳು ಇದ್ದಾರೆ.

ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇನ್ನು ಈ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
House wife dies by electric shock in kuntanadoddi village of ramanagar district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X