ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರದಲ್ಲಿ ಕೊರೊನಾ ಭಯದಿಂದ ಪರೀಕ್ಷೆಗೆ ಗೈರಾದ SSLC ವಿದ್ಯಾರ್ಥಿಗಳೆಷ್ಟು?

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜೂನ್ 25: ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಮೊದಲ ದಿನದ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಭಯದಿಂದಾಗಿ 493 ವಿದ್ಯಾರ್ಥಿಗಳು ಗೈರಾಗಿದ್ದಾರೆ.

Recommended Video

SSLC Exam : ತಮಿಳುನಾಡು, ಆಂಧ್ರದಲ್ಲಿಲ್ಲ, ಕರ್ನಾಟಕದಲ್ಲೇಕೆ SSLC ಪರೀಕ್ಷೆ?| Oneindia Kannada

ಜಿಲ್ಲೆಯ 57 ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ಕೊಠಡಿಯಲ್ಲಿ 20 ಜನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಲಾಗಿತ್ತು. ಒಟ್ಟು 12795 ವಿದ್ಯಾರ್ಥಿಗಳ ಪೈಕಿ 12302 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕಂಟೈನ್ ಮೆಂಟ್ ಪ್ರದೇಶದಿಂದ 34 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 3 ಮಂದಿ ವಿದ್ಯಾರ್ಥಿಗಳಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದೆ. 54 ಮಂದಿ ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಂದ ಬಂದು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದಾರೆ.

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಗಳ ಅಪ್ ಡೇಟ್ಸ್ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಗಳ ಅಪ್ ಡೇಟ್ಸ್

ಬೆಳಿಗ್ಗೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಚನ್ನಪಟ್ಟಣದ ಬಾಲು ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸೋಂಕು ನಿವಾರಣ ಟನಲ್ ನಿರ್ಮಾಣ ಮಾಡಿದ್ದರು. ಪರೀಕ್ಷೆಗೆ ಹಾಜರಾದ ಪ್ರತಿಯೊಬ್ಬ ವಿದ್ಯಾರ್ಥಿಯೂ ಟನಲ್ ಪ್ರವೇಶಿಸಿ ಪರೀಕ್ಷಾ ಕೊಠಡಿಗೆ ಪ್ರವೇಶ ಮಾಡಿದರು. ಸಾಮಾಜಿಕ ಅಂತರದೊಂದಿಗೆ ಮಾಸ್ಕ್ ಧರಿಸಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.

493 Students Absent For SSLC Exam Due To Coronavirus Fear In Ramanagar

ಮಾಗಡಿ ತಾಲ್ಲೂಕಿನ ಜೂನಿಯರ್ ಕಾಲೇಜ್ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ಪ್ರಾರ್ಥನೆ ಮಾಡಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ. ಬೆಳಿಗ್ಗೆ ಸಾಮಾಜಿಕ ಅಂತರದೊಂದಿಗೆ ಮಾಸ್ಕ ಧರಿಸಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡು ಶಿಸ್ತಾಗಿ ಪರೀಕ್ಷಾ ಕೊಠಡಿ ಪ್ರವೇಶ ಮಾಡಿದ ವಿದ್ಯಾರ್ಥಿಗಳು, ಪರೀಕ್ಷೆ ಹಾಲಿನಿಂದ ಗುಂಪು ಗುಂಪಾಗಿ ಹೊರ ಬಂದರು. ಅಲ್ಲದೇ ಹೊರಗಡೆ ಕಾಯುತ್ತಿದ್ದ ವಿದ್ಯಾರ್ಥಿಗಳ ಪೋಷಕರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಿಲ್ಲ. ಇದನ್ನು ನಿಯಂತ್ರಿಸಬೇಕಾದ ಪೊಲೀಸರು ಹಾಗೂ ಶಿಕ್ಷಣ ಇಲಾಖೆ ಕಣ್ಣಮುಚ್ಚಿ ಕುಳಿತಿತ್ತು.

English summary
493 students absent for SSLC first day exams due to coronavirus fear in ramanagar district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X