ಕನಕಪುರ : 5 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ
ರಾಮನಗರ, ಅಕ್ಟೋಬರ್ 25 : ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಕನಕಪುರದಲ್ಲಿ ನಡೆದಿದೆ. ಬಾಲಕನನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ರಂಗನಾಥ ಬಡಾವಣೆಯ ಹೇಮಂತ್ ಬೀದಿ ನಾಯಿಗಳ ದಾಳಿಗೆ ಒಳಗಾದ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿವೆ.

ಹೇಮಂತ್ ತಲೆ, ಕೈ, ತೋಳುಗಳಿಗೆ ನಾಯಿಗಳು ಕಚ್ಚಿ ಗಾಯಗೊಳಿಸಿವೆ. ತಕ್ಷಣ ಸ್ಥಳೀಯರು ನಾಯಿಗಳನ್ನು ಓಡಿಸಿ, ಬಾಲಕನನ್ನು ರಕ್ಷಣೆ ಮಾಡಿದೆ. ಮೊದಲು ಹಾರೋಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕನಕಪುರದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಪುರಸಭೆಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications