ರಾಮನಗರ ಜಿಲ್ಲೆಯಲ್ಲಿ ಇಂದು 59 ಕೊರೊನಾ ಸೋಂಕು ಪ್ರಕರಣ ಪತ್ತೆ
ರಾಮನಗರ, ಆಗಸ್ಟ್ 02: ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಜಿಲ್ಲೆಯಲ್ಲಿ ಇಂದು ಸಹ ತನ್ನ ಆರ್ಭಟವನ್ನು ಮುಂದುವರೆಸಿದೆ.
ಇಂದು 59 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1209 ಕ್ಕೆ ಏರಿಕೆಯಾಗಿದೆ. ಚನ್ನಪಟ್ಟಣ ತಾಲ್ಲೂಕಿನಲ್ಲಿ 22 ಪ್ರಕರಣ, ಮಾಗಡಿ ತಾಲ್ಲೂಕಿನಲ್ಲಿ 5 ಪ್ರಕರಣ, ಕನಕಪುರ ತಾಲ್ಲೂಕಿನಲ್ಲಿ 11 ಪ್ರಕರಣ, ರಾಮನಗರ ತಾಲ್ಲೂಕಿನಲ್ಲಿ 21 ಪ್ರಕರಣಗಳು ಕಂಡುಬಂದಿರುತ್ತದೆ.

ಎಲ್ಲ ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್-19 ರೆಫೆರಲ್ ಆಸ್ಪತ್ರೆಗೆ ದಾಖಲಿಸಿದೆ. ಇಂದು 5 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 544 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ. ಸದ್ಯ 648 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications