ರಾಮನಗರದಲ್ಲಿ 64, ಚಿತ್ರದುರ್ಗದಲ್ಲಿ 60 ಜನರಿಗೆ ಕೊರೊನಾ ಸೋಂಕು ದೃಢ

ರಾಮನಗರ, ಆಗಸ್ಟ್ 02: ರಾಮನಗರ ಜಿಲ್ಲೆಯಲ್ಲಿ ಶನಿವಾರ 64 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 12 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ವರದಿಯಲ್ಲಿ ಚನ್ನಪಟ್ಟಣ ತಾಲ್ಲೂಕಿನಲ್ಲಿ 26, ಮಾಗಡಿ ತಾಲ್ಲೂಕಿನಲ್ಲಿ 4, ಕನಕಪುರ ತಾಲ್ಲೂಕಿನಲ್ಲಿ 17, ರಾಮನಗರ ತಾಲ್ಲೂಕಿನಲ್ಲಿ 17 ಪ್ರಕರಣ ದೃಢವಾಗಿವೆ.

ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1150 ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 539 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 594 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

64 New Cases Tested Coronavirus Positive In Ramanagara

ಚಿತ್ರದುರ್ಗ ಜಿಲ್ಲೆಯಲ್ಲಿ 60 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ ಮತ್ತೆ 60 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 721 ಕ್ಕೆ ಏರಿಕೆಯಾದಂತಾಗಿದೆ. ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಹೊಳಲ್ಕೆರೆ-04, ಹಿರಿಯೂರು-18, ಚಳ್ಳಕೆರೆ-12, ಹೊಸದುರ್ಗ-08 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 02 ಸೇರಿದಂತೆ ಒಟ್ಟು 60 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಒಟ್ಟು 721 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೆ 15 ಜನ ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+