ದರ್ಗಾ ತಲುಪುವ ಮೊದಲೇ ಜವರಾಯನ ಅಟ್ಟಹಾಸಕ್ಕೆ ಯುವಕ ಬಲಿ
Recommended Video

ರಾಮನಗರ, ಜೂನ್. 18 : ರಸ್ತೆಯ ಪಕ್ಕದ ವಿದ್ಯುತ್ ಕಂಬ ತುಂಡಾಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದ ಮುತ್ತಯ್ಯನಕಟ್ಟೆ ಗ್ರಾಮದ ಬಳಿ ಭಾನುವಾರ ನಡೆದಿದೆ.
ವಿದ್ಯುತ್ ಕಂಬದ ಅಡಿ ಸಿಲುಕಿ ಮೃತಪಟ್ಟ ಯುವಕ ರಾಮನಗರದ ನಿವಾಸಿ ಇಸ್ಮಾಯಿಲ್( 22). ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಹಂಚಿಕುಪ್ಪೆ ಗ್ರಾಮದಲ್ಲಿರುವ ದರ್ಗಾಕ್ಕೆ ತೆರಳುವ ಸಮಯದಲ್ಲಿ ದುರ್ಘಟನೆ ನಡೆದಿದೆ.
ಇನ್ನು ಕೇವಲ ಅರ್ಧ ಕಿಲೋಮೀಟರ್ ಕ್ರಮಿಸಿದ್ದರೆ ದರ್ಗಾ ತಲುಪುತ್ತಿದ್ದ ದುರ್ದೈವಿ ಯುವಕ. ಆದರೆ ದರ್ಗಾ ತಲುಪುವ ಮೊದಲೇ ಜವರಾಯನ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ.

ಮಾಗಡಿ ರಸ್ತೆಯಲ್ಲಿ ವೀರೇಗೌಡನ ದೊಡ್ಡಿ ಹಾಗೂ ಅತ್ತಿಂಗೆರೆ ಮಧ್ಯ ಭಾಗದಲ್ಲಿರುವ ಮುತ್ತಯ್ಯನ ಕಟ್ಟೆಯ ಬಳಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬದ ಬುಡದ ಮಣ್ಣು ಸತತ ಮಳೆಯಿಂದ ಸಡಿಲವಾಗಿದ್ದ ಕಾರಣ ವಿದ್ಯುತ್ ಕಂಬ ತುಂಡಾಗಿ ರಸ್ತೆಯ ಮೇಲೆ ಬಿದ್ದಿದೆ.
ಅದೇ ಸಮಯಕ್ಕೆ ಸರಿಯಾಗಿ ದರ್ಗಾಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಇಸ್ಮಾಯಿಲ್ ಮೇಲೆ ಬಿದ್ದಿದೆ. ಹಬ್ಬದ ಸಂಭ್ರಮದಲ್ಲಿದ್ದ ಇಸ್ಮಾಯಿಲ್ ಕುಟುಂಬ ಮಗನ ಸಾವಿನಿಂದ ಕಣ್ಣೀರಿಡುತ್ತಾ ಶೋಕಸಾಗರದಲ್ಲಿ ಮುಳುಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications