Channapatna Results: ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ
Channapatna By Election Results 2024: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ಶನಿವಾರ (ನವೆಂಬರ್ 23) ಫಲಿತಾಂಶ ಪ್ರಕಟವಾಗಿದೆ. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕಡೆಗಳಲ್ಲೂ ಬಿಜೆಪಿಗೆ ಹೀನಾಯ ಸೋಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಈ ನಡುವೆ ಚನ್ನಪಟ್ಣದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನಲೆ ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡ್ಲೂರು ಸಮೀಪ ಶ್ರೀರಾಮಪುರದಲ್ಲಿ ನಿಖಿಲ್ ಅಭಿಮಾನಿ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತ ಮಂಜುನಾಥ ಅಲಿಯಾಸ್ ಅಭಿ(35) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ತರಾಗಿರುವ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದ ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿತ್ತು. ನಿನ್ನೆ ಅಂದರೆ ನವೆಂಬರ್ 23ರಂದು ಫಲಿತಾಂಶ ಹೊರಬಿದ್ದಿದ್ದು, ಮೂರರಲ್ಲೂ ಬಿಜೆಪಿ ಜಯಭೇರಿ ಬಾರಿಸಿಸಿದೆ. ಇನ್ನು ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು (ನವೆಂಬರ್ 24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಚರ್ಚೆ ಮಾಡಿ ಏನೂ ಪ್ರಯೋಜನ ಇಲ್ಲ. ಜನರು ನೀಡಿರುವ ತೀರ್ಪಿಗೆ ತಲೆ ಬಾಗಲೇಬೇಕು. ಏನೇ ಇದ್ದರೂ ಆಮೇಲೆ ಮಾತನಾಡುತ್ತೇನೆ ಎಂದು ಮಗನ ಸೋಲಿನ ಬಗ್ಗೆ ಮೊಲದ ಪ್ರತಿಕ್ರಿಯೆ ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು 25,413 ಮತಗಳಿಂದ ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಸಿ.ಪಿ.ಯೋಗೇಶ್ವರ್ 1,12,642 ಮತ ಪಡೆದು ಗಲುವು ಸಾಧಿಸಿದರೆ, ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆಯುವ ಮೂಲಕ ಸೋಲನುಭವವಿಸಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿಯೇ ನಡೆದಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ, 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಎರಡು ಸೋಲು ಕಂಡಿದ್ದದ್ದರು. ಆದರೂ ನಿಖಿಲ್ ಕುಮಾರಸ್ವಾಮಿ ಈ ಬಾರಿಯೂ ಕೂಡ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದು ಮುಗ್ಗರಿಸಿದ್ದಾರೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications