ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಮಾರ್ಚ್‌ನಲ್ಲಿ ಅಡಿಗಲ್ಲು; ಅಶ್ವಥ್ ನಾರಾಯಣ
ರಾಮನಗರ, ಜನವರಿ 26: ಮಾರ್ಚ್ ತಿಂಗಳ ಮೊದಲ ವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳ ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ರಾಮನಗರವನ್ನು "ಹೆಲ್ತ್ ಸಿಟಿ'ಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.
ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದ ಅವರು, ಜಿಲ್ಲೆಯಲ್ಲಿ ಕೇವಲ 250 ಹಾಸಿಗೆಗಳನ್ನು ಹೊಂದಿದ್ದ ಜಿಲ್ಲಾಸ್ಪತ್ರೆಯ ಸಾಮರ್ಥ್ಯವನ್ನು 650 ಹಾಸಿಗೆಗಳಿಗೆ ಏರಿಸಲಾಗಿದ್ದು, ಇಲ್ಲಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು.
ರೈತರ ಸಬಲೀಕರಣಕ್ಕೆ ಪ್ರಧಾನಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಗೆ 179 ಕೋಟಿ ರೂ. ನೆರವು ರೈತರ ಬ್ಯಾಂಕ್ ಖಾತೆಗಳಿಗೆ ಹರಿದು ಬಂದಿದೆ. ಇದರಿಂದ 1.18 ಲಕ್ಷ ರೈತ ಕುಟುಂಬಗಳಿಗೆ ಲಾಭವಾಗಿದೆ. ಇದರ ಜೊತೆಗೆ ರಾಜ್ಯ ಸರಕಾರವು 63 ಕೋಟಿ ರೂ. ಕೊಟ್ಟಿದೆ ಎಂದು ಸಚಿವ ಅಶ್ವಥ್ ನಾರಾಯಣ ವಿವರಿಸಿದರು.

ರಾಮನಗರ ಜಿಲ್ಲೆಯ ರೈತರಿಗೆ 18 ಕೋಟಿ ರೂ. ವಿನಿಯೋಗಿಸಿ ಕೃಷಿ ಉಪಕರಣಗಳನ್ನು ಕೊಡಲಾಗಿದೆ. ಹಾಗೆಯೇ, ರೇಷ್ಮೆ ಬೆಳೆಗಾರರಿಗೆ 25 ಕೋಟಿ ರೂ. ನೇರ ಅನುದಾನ ಒದಗಿಸಲಾಗಿದೆ. ಜತೆಗೆ ಮುಂದಿನ ಸಂಪುಟ ಸಭೆಯಲ್ಲಿ ಚನ್ನಪಟ್ಟಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಿಸುವ ಯೋಜನೆಗೆ ಅನುಮೋದನೆ ದೊರಕಿಸಿ ಕೊಡಲಾಗುವುದು. ಜೊತೆಗೆ ಭೈರಾಪಟ್ಟಣದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಕೃಷಿ ಮಾರುಕಟ್ಟೆಯನ್ನು ಸ್ಥಾಪಿಸಲಾಗುವುದು ಎಂದು ಅವರು ಜಿಲ್ಲೆಯ ಜನರಿಗೆ ಸಿಹಿಸುದ್ದಿ ನೀಡಿದರು.
ಜಿಲ್ಲೆಯಲ್ಲಿ 'ಜಲ ಜೀವನ್ ಮಿಷನ್' ಯೋಜನೆಯನ್ನು ಸಮರೋಪಾದಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇನ್ನೂ ಬಾಕಿ ಉಳಿದಿರುವ ಮನೆಗಳಿಗೆ ಈ ವರ್ಷದ ಡಿಸೆಂಬರ್ ಹೊತ್ತಿಗೆ ಹೊಸದಾಗಿ ನಳ ಸಂಪರ್ಕ ಕೊಟ್ಟು, ನದಿ ಮೂಲದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುವುದು. ಇದರಿಂದ ಜನರ ಆರೋಗ್ಯ ಸುಧಾರಿಸಲಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.
ಕಳೆದ ಎರಡು ವರ್ಷಗಳಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರ ಪ್ರತಿ ಲೀಟರ್‌ಗೆ 5 ರೂ.ನಂತೆ ಜಿಲ್ಲೆಯ ಹಾಲು ಉತ್ಪಾದಕರಿಗೆ 122 ಕೋಟಿ ರೂ.ಗಳನ್ನು ಖಾತೆಗೆ ಜಮಾ ಮಾಡಿದೆ ಎಂದರು.
ರಾಮನಗರ ಜಿಲ್ಲೆಯಲ್ಲಿ ಒಟ್ಟು 2.11 ಲಕ್ಷ ಕುಟುಂಬಗಳಿದ್ದು, ಈ ಪೈಕಿ 2.02 ಲಕ್ಷ ಕುಟುಂಬಗಳಿಗೆ ಉದ್ಯೋಗ ಚೀಟಿ ನೀಡಿದೆ. ಇದರಲ್ಲಿ 4.52 ಲಕ್ಷ ಕೂಲಿ ಕಾರ್ಮಿಕರಿರುತ್ತಾರೆ. 2021-22ನೇ ಸಾಲಿನಲ್ಲಿ ಎಂ-ನರೇಗಾ ಯೋಜನೆಯಡಿ 30 ಲಕ್ಷ ಮಾನವ ದಿನಗಳ ವಾರ್ಷಿಕ ಗುರಿಯನ್ನು ಹೊಂದಿದ್ದು, ಈಗಾಗಲೇ 67 ಲಕ್ಷಗಳ ಮಾನವ ದಿನಗಳ ಸೃಜನೆ ಮಾಡಿದೆ. 2021-22ನೇ ಸಾಲಿಗೆ 153 ಕೋಟಿ ರೂ.ಗಳ ಆರ್ಥಿಕ ಗುರಿಯನ್ನು ಹೊಂದಿದ್ದು, ಈಗಾಗಲೇ 234 ಕೋಟಿ ರೂ.ಗಳಷ್ಟು ವೆಚ್ಚವಾಗಿದೆ. ರಾಮನಗರ ಜಿಲ್ಲೆ ಆರ್ಥಿಕ ಗುರಿಯಲ್ಲಿ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿರುತ್ತದೆ ಎಂದು ಹೇಳಿದರು.

ರಾಮನಗರ ಜಿಲ್ಲೆಯಲ್ಲಿ ಇದುವರೆಗೆ 252 ಗ್ರಾಮಗಳನ್ನು ಬೂದು ನೀರು ಮುಕ್ತ ಗ್ರಾಮಗಳೆಂದು ಘೋಷಿಸಲಾಗಿದ್ದು. ಗಣರಾಜ್ಯೋತ್ಸವದ ದಿನವಾದ ಇಂದು ಮತ್ತೆ 126 ಗ್ರಾಮಗಳನ್ನು ಬೂದು ನೀರು ಮುಕ್ತ ಗ್ರಾಮಗಳೆಂದು ಹೆಮ್ಮೆಯಿಂದ ಘೋಷಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2021-22ನೇ ಸಾಲಿನಲ್ಲಿ ಜಿಲ್ಲೆಯ ರೈತರಿಂದ 3377 ರೂ.ಗಳ ದರದಲ್ಲಿ ಕ್ವಿಂಟಾಲ್ ರಾಗಿ ಮತ್ತು 1940 ರೂ. ದರದಲ್ಲಿ ಕ್ವಿಂಟಾಲ್ ಭತ್ತ ಖರೀದಿಸಲು ದರ ನಿಗದಿ ಪಡಿಸಲಾಗಿದ್ದು, ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಕೋವಿಡ್-19 ರ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಅನ್ನಭಾಗ್ಯ ಯೋಜನೆಯ ಜೊತೆಯಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಫಲಾನುಭವಿಗಳು ಸೇರಿ ಒಟ್ಟು 9,38,093 ಫಲಾನುಭವಿಗಳಿಗೆ ತಲಾ 5 ಕೆ.ಜಿ.ಯಂತೆ ಅಕ್ಕಿಯನ್ನು ವಿತರಣೆ ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ, ಅಪರ ಜಿಲ್ಲಾಧಿಕಾರಿ ಜವರೇಗೌಡ. ಟಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಉಪಕಾರ್ಯದರ್ಶಿ ರಮೇಶ್ ತಹಶೀಲ್ದಾರ್ ವಿಜಯ್ ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್. ಕೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಪಥಸಂಚಲನ:
ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಥ ಸಂಚಲನದಲ್ಲಿ 9 ತಂಡಗಳು ಭಾಗವಹಿಸಿದ್ದು, ನೇತೃತ್ವವವನ್ನು ರವಿ ವಹಿಸಿದ್ದರು.
ಭಾಗವಹಿಸಿದ ತಂಡಗಳು
ರಾಮನಗರ ಪೊಲೀಸ್ ತಂಡ- ತಂಡದ ನಾಯಕ ಮಂಜುನಾಥ್
ಚನ್ನಪಟ್ಟಣ ಪೊಲೀಸ್ ತಂಡ- ತಂಡದ ನಾಯಕ ಪ್ರದೀಪ್
ಮಾಗಡಿ ಪೊಲೀಸ್ ತಂಡ- ತಂಡದ ನಾಯಕ ಬಸವರಾಜ್
ಜಿಲ್ಲಾ ಶಸ್ತ್ರಮೀಸಲು ಪಡೆ- ತಂಡದ ನಾಯಕ ಶಶಿಕುಮಾರ್
ಗೃಹ ರಕ್ಷಕದಳ ತಂಡ- ತಂಡದ ನಾಯಕ ಶಿವನಂಜಯ್ಯ. ಕೆ. ಹೆಚ್
ರಾಮನಗರ ಜಿಲ್ಲಾ ಮಹಿಳಾ ಪೊಲೀಸ್ ತಂಡ- ತಂಡದ ನಾಯಕಿ ಶುಭಾಂಬಿಕ
ಗೃಹ ರಕ್ಷಕದಳ ಮಹಿಳಾ ತಂಡ- ತಂಡದ ನಾಯಕ ಕಮಾರ್
ಎನ್‌ಸಿಸಿ ತಂಡ - ತಂಡದ ನಾಯಕ ಗಗನ್ ಯಾದವ್
ರಾಮನಗರ ಜಿಲ್ಲಾ ಪೊಲೀಸ್ ವಾದ್ಯ ವೃಂದ ತಂಡಗಳು ಭಾಗಿಯಾಗಿ ಪಥಸಂಚಲನ ನಡೆಸಿದರು.
-
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications