ರಾಮನಗರದಲ್ಲಿ ಕ್ರಿಮಿನಾಶಕ ಇಂಜೆಕ್ಷನ್ ಕೊಟ್ಟು ಪತ್ನಿ ಕೊಲೆ ಮಾಡಿದ ಪತಿ
ರಾಮನಗರ, ಜನವರಿ 15 : ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ವಿಕೃತ ಮನಸ್ಸಿನ ಪತಿ ಆಕೆಗೆ ವಿಷದ ಇಂಜೆಕ್ಷನ್ ಕೊಟ್ಟು ಮನೆಯಲ್ಲಿಯೇ ಉಸಿರುಗಟ್ಟಿಸಿ ಸಾಯಿಸಿರುವ ವಿಲಕ್ಷಣ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರದ ಹನುಮಂತನಗರ ಮನೆಯೊಂದರಲ್ಲಿ ವಾಸವಾಗಿದ್ದ ಕೊಳಮಾರನಕುಪ್ಪೆ ಮೂಲದ ದೀಪಾ (22) ಎಂಬಾಕೆಯೇ ಕೊಲೆಯಾಗಿರುವ ದುರ್ದೈವಿ. ದೀಪಾಳನ್ನ ವಡ್ಡರದೊಡ್ಡಿಯ ವೆಂಕಟೇಶ ಎಂಬಾತನೊಂದಿಗೆ ವಿವಾಹ ಮಾಡೊಕೊಡಲಾಗಿತ್ತು. ವೆಂಕಟೇಶ ಅನುಮಾನದ ಪಿಶಾಚಿಯಂತೆ ವರ್ತಿಸುತ್ತಿದ್ದ ಅಲ್ಲದೆ ಮಾನಸಿಕ ಹಾಗೂ ದೈಹಿಕವಾಗಿಯೂ ಹಿಂಸಿಸುತ್ತಿದ್ದ ಎನ್ನಲಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ದಿನಗೂಲಿ ನೌಕರನಾಗಿರುವ ವೆಂಕಟೇಶನಿಗೆ ಅಕ್ರಮ ಸಂಭಂದವಿತ್ತು ಎನ್ನಲಾಗಿದೆ. ಇದು ದೀಪಾಳ ಗಮನಕ್ಕೆ ಬಂದಿದ್ದು, ಅದನ್ನ ತನ್ನ ಕುಟುಂಬಸ್ಥರಿಗೆ ತಿಳಿಸುವ ಬೆದರಿಕೆ ಹಾಕಿದ್ದರಿಂದ ವೆಂಕಟೇಶ್ ಹೆದರಿದ್ದಾನೆ.

ಹೀಗಾಗಿ ವೆಂಕಟೇಶ ಪರ್ಟಿಲೈಸರ್ ಅಂಗಡಿಯಿಂದ (ಕ್ರಿಮಿನಾಶಕ)ವಿಷದ ಬಾಟಲಿ ತಂದು ಅದನ್ನ ಬೇರೆ ಬಾಟಲಿಗೆ ಹಾಕಿ ತನ್ನ ಹೆಂಡತಿ ದೀಪಾಳಿಗೆ ಇಂಜೆಕ್ಷನ್ ಕೊಟ್ಟಿದ್ದಾನೆ. ಹಾಗೂ ಉಸಿರುಗಟ್ಟಿಸಿ ಸಾಯಿಸಿದ್ದಾನೆ. ನಂತರ ತನಗೇನು ಗೊತ್ತಿಲ್ಲ ಎನ್ನುವಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಹುಷಾರಿಲ್ಲ ಎಂದು ಹಾಸಿಗೆ ಮೇಲೆ ಡ್ರಿಪ್ಸ್ ಹಾಕಿಸಿಕೊಂಡು ಮಲಗಿ ನಾಟಕವಾಡಿದ್ದಾನೆ.

ಆರೋಪಿ ವೆಂಕಟೇಶ್ ನನ್ನು ಪೋಲೀಸರು ಎಷ್ಟೇ ವಿಚಾರಿಸಿದರೂ ಚಾಲಾಕಿ ವೆಂಕಟೇಶ ಬಾಯಿಬಿಟ್ಟಿರಲಿಲ್ಲ. ಕಡೆಗೆ ಅನುಮಾನದಿಂದಲೇ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿ ತಾನೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಮೃತ ದೀಪಾಳ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟುತ್ತಿತ್ತು. ಈ ಸಂಬಂಧ ಐಜೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications