ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ಯುವಕ ಸಾವು

ರಾಮನಗರ, ಆಗಸ್ಟ್.30: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ಯವಕ ರೇವಣಸಿದ್ದೇಶ್ವರ ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ 9 ಗಂಟೆಗೆ ರಾಮನಗರದಲ್ಲಿ ನಡೆದಿದೆ.

ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಪುರಾಣ ಪ್ರಸಿದ್ಧ ರೇವಣ ಸಿದ್ದೇಶ್ವರ ಬೆಟ್ಟಕ್ಕೆ ನಾಲ್ವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿ ಭರತ್(28) ಬೆಟ್ಟ ಹತ್ತುವ ಸಮಯದಲ್ಲಿ ಆಯಾತಪ್ಪಿ ಬೆಟ್ಟದಿಂದ ಬಿದ್ದು ಸಾವನ್ನಪ್ಪಿದ್ದಾನೆ.

ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

A young man has died from falling from the Revana Siddeshwara Betta

ಎಲ್ ಜಿ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿದ್ದ ಭರತ್ ಬೆಂಗಳೂರಿನ ಸುಂಕದಕಟ್ಟೆ ಪೈ ಇಂಟರ್ ನ್ಯಾಷನಲ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದನು.

ರೇವಣಸಿದ್ದೇಶ್ವರ ಬೆಟ್ಟಕ್ಕೆ ಭರತ್ ಸ್ನೇಹಿತರ ಜೊತೆ ಬೈಕ್ ನಲ್ಲಿ ಬಂದಿದ್ದ. ಜನರು ಬೆಟ್ಟ ಹತ್ತಲು ಬಳಸುತ್ತಿದ್ದ ದಾರಿ ಬಿಟ್ಟು, ಇಳಿಜಾರಿನ ದಾರಿಯಲ್ಲಿ ಬೆಟ್ಟ ಹತ್ತಲು ಪ್ರಯತ್ನಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+