Maha Shivaratri 2023: ಮಲೆಮಹದೇಶ್ವರಬೆಟ್ಟದ ಪಾದಯಾತ್ರಿಗಳ ಭದ್ರತೆಗೆ ರಾಮನಗರ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳಿವು
ರಾಮನಗರ, ಫೆಬ್ರವರಿ, 12: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಮಲೈಮಹದೇಶ್ವರ ಬೆಟ್ಟಕ್ಕೆ ಹಲವು ಜಿಲ್ಲೆಗಳಿಂದ ಮಾದಪ್ಪನ ಭಕ್ತಸಾಗರ ಕಾಲ್ನಡಿಗೆಯಲ್ಲಿ ಬರುತ್ತದೆ. ಕಳೆದ ಹಲವು ದಶಕಗಳಿಂದ ಈ ಪಾದಯಾತ್ರೆ ತೆರಳುವ ಪದ್ಧತಿ ಇದೆ. ಹಾಗಾಗಿ ಮಾದಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ರಕ್ಷಣೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ.
ಕಳೆದ ವರ್ಷ ಶಿವರಾತ್ರಿ ಸಮಯದಲ್ಲಿ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರು ಕಾವೇರಿ ನದಿ ದಾಟುವ ಸಂದರ್ಭದಲ್ಲಿ, ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಜನರು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋದ ಘಟನೆಗಳು ನಡೆದಿವೆ. ಆದ್ದರಿಂದ ಈ ಬಾರಿ ಪಾದಯಾತ್ರೆ ತೆರಳುವ ಯಾತ್ರಾರ್ಥಿಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತ್ತು.
ಕಂದಾಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪಾದಯಾತ್ರಿಗಳ ಸುರಕ್ಷತಾ ಸಭೆಯನ್ನು ನಡೆಸಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶಿವನಂದಾಮೂರ್ತಿ, ಶಿವರಾತ್ರಿ ಹಬ್ಬದ ಪ್ರಯುಕ್ತ ಫೆಬ್ರವರಿ 13 ಮತ್ತು 14 ರಂದು ಕನಕಪುರ ತಾಲೂಕು ಬೊಮ್ಮಸಂದ್ರ ಗ್ರಾಮದ ಬಳಿ ಹರಿಯುವ ಕಾವೇರಿ ನದಿಯನ್ನು ದಾಟುವ ಭಕ್ತರಿಗೆ ತೊಂದರೆ ಆಗದಂತೆ ಸೂಕ್ತ ಕ್ರಮವನ್ನು ತೆಗುಕೊಳ್ಳಲಾಗಿದೆ.

ಅಧಿಕಾರಿಗಳಿಗೆ ಸೂಚನೆ ನೀಡಿದ ಅಪರ ಜಿಲ್ಲಾಧಿಕಾರಿ
ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಸಂದರ್ಭದಲ್ಲಿ ಕಾವೇರಿ ನದಿಯಲ್ಲಿನ ನೀರಿನ ಪ್ರಮಾಣ ಹೆಚ್ಚಾದಲ್ಲಿ ಅನಾಹುತಗಳು ಉಂಟಾಗುವ ಸಂಭವಗಳು ಹೆಚ್ಚಾಗಿರುತ್ತವೆ. ಆದ್ದರಿಂದ ಮಾದಪ್ಪನ ಭಕ್ತರ ಭದ್ರತೆಗಾಗಿ 30 ಜನ ಸಿಬ್ಬಂದಿಗಳನ್ನು ಹಾಗೂ 20 ಜನ ನುರಿತ ಈಜುಗಾರನ್ನೊಳಗೊಂಡ ತಂಡವನ್ನು ಕಾವೇರಿ ನದಿ ಪಾತ್ರದಲ್ಲಿ ನಿಯೋಜಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಗ್ನಿಶಾಮಕ ವಾಹನಗಳ ನಿಯೋಜನೆಗೆ ನಿರ್ಧಾರ
ಪಾದಯಾತ್ರೆ ತೆರಳುವ ಸಮಯದಲ್ಲಿ ನದಿ ಸಮೀಪ ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಅಗ್ನಿಶಾಮವಾಹನ, ಮೋಟಾರ್ ಬೋಟ್ ಹಾಗೂ ಅವಶ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮವಹಿಸಬೇಕು. ಹಾಗೂ ಮುಂಜಾಗ್ರತಾ ಕ್ರಮವಾಗಿ ಭಕ್ತರ ಸುರಕ್ಷಿತ ದೃಷ್ಟಿಯಿಂದ 10 ತೆಪ್ಪಗಳನ್ನು ಅರಣ್ಯ ಇಲಾಖೆಯು ಒದಗಿಸಬೇಕು. ಆರೋಗ್ಯ ಇಲಾಖೆಯು 24 ಗಂಟೆ ಕಾರ್ಯ ನಿರ್ವಹಿಸುವಂತೆ ನುರಿತ ವೈದ್ಯರ ತಂಡವನ್ನು ನಿಯೋಜಿಸಿ ಅಗತ್ಯ ಔಷಧಗಳು ಹಾಗೂ ಸುಸಜ್ಜಿತ ಆಂಬ್ಯುಲೆನ್ಸ್ ಒದಗಿಸಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಸೂಚನೆ ನೀಡಿದರು.

ಅವಶ್ಯವಿರುವ ಕಡೆ ಸಿಸಿಟಿವಿ ಅಳವಡಿಕೆ
ಪಾದಯಾತ್ರಿಗಳಿಗೆ ಉತ್ತಮ ವಾತವರಣದಲಿಪಾದಯಾತ್ರೆ ಕೈಗೊಳ್ಳಲು ಅನುಕೂಲವಾಗುವಂತೆ ಸ್ವಚ್ಚತಾ ವ್ಯವಸ್ಥೆ, ಸುಸಜ್ಜಿತ ಬೆಳಕಿನ ವ್ಯವಸ್ಥೆ ಹಾಗೂ ಭದ್ರತಾ ದೃಷ್ಟಿಯಿಂದ ಅವಶ್ಯವಿರುವ ಕಡೆ ಸಿಸಿಟಿವಿಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಪಾದಯಾತ್ರಿಗಳಿಗೆ ಅರಿವು ಮೂಡಿಸಲು ಧ್ವನಿವರ್ಧಕಗಳನ್ನು ಅಳವಡಿಸಬೇಕು. ಪಾದಯಾತ್ರಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಭಾಗಿಯಾದ ಅಧಿಕಾರಿಗಳು
ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರಿಗೆ ರಕ್ಣಣಾ ತಂಡಕ್ಕೆ ಉಪ ವಿಭಾಗಾಧಿಕಾರಿಗಳಾದ ಮಂಜುನಾಥ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು. ಇನ್ನೂ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುರೇಶ್, ಕನಕಪುರ ಪೊಲೀಸ್ ಉಪಾಧೀಕ್ಷಕರಾದ ಮೋಹನ್, ಕಾವೇರಿ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ವೃತ್ತ ನಿರೀಕ್ಷಕರು, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಂಜುನಾಥ್, ಜಿಲ್ಲಾ ಗೃಹರಕ್ಷಣಾಧಿಕಾರಿ ಹಾಗೂ ಕನಕಪುರ ತಹಶೀಲ್ದಾರ್ ಸ್ಮಿತಾ ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications