ಶಕ್ತಿ ಮೀರಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ, ಡಿ.ಕೆ ಶಿವಕುಮಾರ್‌ ಸಿಎಂ ಆಗಬೇಕು-ಕಾಂಗ್ರೆಸ್‌ ಶಾಸಕ

ರಾಮನಗರ ನವೆಂಬರ್‌ 03: ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳೊಳಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆಗಳು ತೀವ್ರವಾಗಿ ಕೇಳಿ ಬರುತ್ತಿದೆ. ಹೀಗಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿದ್ದರು.

ಸಿಎಂ ಸಿದ್ದರಾಮಯ್ಯ ಈ ಹೇಳಿಕೆಯ ಬಗ್ಗೆ ಕಾಂಗ್ರೆಸ್‌ನಲ್ಲೇ ಪರ ವಿರೋಧ ಚರ್ಚೆಗಳು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್‌ ಬೆಂಬಲಿತ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದ್ದು, ಒಂದೂವರೆ ವರ್ಷದ ಬಳಿಕ ಡಿ.ಕೆ ಶಿವಕುಮಾರ್‌ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ.

After a one and half year D.K Shivakumar will become the CM- Congress MLA

ಈ ಬಗ್ಗೆ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದುವರೆ ವರ್ಷದ ಬಳಿಕ ಡಿ.ಕೆ ಶಿವಕುಮಾರ್‌ ಸಿಎಂ ಆಗಬೇಕು. ಅವರು ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮ ಆಸೆ. ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ಶಕ್ತಿ ಮೀರಿ ಕೆಲಸ ಮಾಡಿ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್‌ಗೆ ಅವಕಾಶ ಸಿಗಲೇಬೇಕು ಎಂದು ಆಗ್ರಹಿಸಿದರು.

ಇದು ನನ್ನ ಒಬ್ಬನ ಆಸೆಯಲ್ಲ ರಾಜ್ಯದ 224 ಕ್ಷೇತ್ರದ ಜನತೆ ಕೂಡಾ ಅದನ್ನೇ ಬಯಸಿದ್ದಾರೆ. ಡಿ.ಕೆ.ಶಿವಕುಮಾರ್ ತಳಮಟ್ಟದಿಂದ ಹಲವಾರು ಕಾರ್ಯಕ್ರಮ ಹಮ್ಮಿಕೊಂಡು, ಕಾರ್ಯಕರ್ತರಿಗೆ ಶಕ್ತಿ ಕೊಟ್ಟು, ಪಕ್ಷವನ್ನು ಉಳಿಸಿ, ಬೆಳಸಿ ಪಕ್ಷವನ್ನು ಅಧಿಕಾರಕ್ಕೆ ತರಲು 90% ‌ಯಶ್ವಸಿಯಾಗಿದ್ದಾರೆ ಎಂದು ಹೇಳಿದರು.

After a one and half year D.K Shivakumar will become the CM- Congress MLA

ಸಿಎಂ ಬದಲಾವಣೆ ಬಗ್ಗೆ ಮಾತನಾಡುವವರು ಕೆಲಸಕ್ಕೆ ಬಾರದವರು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದ್ದಾರೆ. ಇಲ್ಲಿ ಕೆಲಸಕ್ಕೆ ಬಾರದವರು ಯಾರೂ ಇಲ್ಲ. ಎಲ್ಲರೂ ಕೆಲಸಕ್ಕೆ ಬರುವವರೇ. ಅವರನ್ನ ಶಾಸಕ ಅಂತ ಕರೆಯುತ್ತಾರೆ. ಅವರ ಬಗ್ಗೆ ಕೀಳಾಗಿ ಮಾತನಾಡಬಾರದು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಹೊಸಪೇಟೆಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ಗೆಲ್ಲಿಸಿ ಬಹುಮತ ನೀಡಿದ್ದಾರೆ. ಐದು ವರ್ಷ ಕಾಂಗ್ರೆಸ್ ಸರ್ಕಾರವೇ ಆಡಳಿತ ಇರುತ್ತದೆ. ನಾನೇ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಒಮ್ಮೆ ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಯಶಸ್ವಿಯಾಗಿದ್ದರಿಂದ, ಈಗ ಮತ್ತೆ ಆ ಪ್ರಯತ್ನಕ್ಕೆ ಕೈಹಾಕಬಹುದು ಎಂದುಕೊಂಡಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+