ಚನ್ನಪಟ್ಟಣದಲ್ಲಿ ಶಕ್ತಿ ಪ್ರದರ್ಶಿಸಲು ಸಿ.ಪಿ.ಯೋಗೇಶ್ವರ ಸಜ್ಜು!
ರಾಮನಗರ, ಜನವರಿ 15 : ಹಲವಾರು ಕಾರಣಗಳಿಂದಾಗಿ ಈ ಬಾರಿಯ ಚುನಾವಣೆಯಲ್ಲಿ ಕುತೂಹಲ ಕೆರಳಿಸಿರುವ ಕ್ಷೇತ್ರ ಚನ್ನಪಟ್ಟಣ. ಜ.17ರಂದು ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಲು ಸಿ.ಪಿ.ಯೋಗೇಶ್ವರ ಸಜ್ಜಾಗಿದ್ದಾರೆ.
ಚನ್ನಪಟ್ಟಣಲ್ಲಿ ಜ.17ರಂದು ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ ಅವರಿಗೆ ಇದು ಪ್ರತಿಷ್ಠೆಯ ಸಮಾವೇಶ.
ಸುಮಾರು 40 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಚನ್ನಪಟ್ಟಣ ತಾಲೂಕು ಪಂಚಾಯಿತಿಯ 17 ಸದಸ್ಯರು ಅಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ.

ಚನ್ನಪಟ್ಟಣ ಕ್ಷೇತ್ರ ಸದ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಪ್ರತಿಷ್ಠೆಯ ಕಣವಾಗಿದೆ. ಸಿ.ಪಿ.ಯೋಗೇಶ್ವರ ಮತ್ತು ಡಿ.ಕೆ.ಶಿವಕುಮಾರ್ ಅವರು ಪಕ್ಷದ ಗೆಲುವಿಗಾಗಿ ಕ್ಷೇತ್ರದಲ್ಲಿ ತಂತ್ರ ರೂಪಿಸುತ್ತಿದ್ದಾರೆ.
ಚನ್ನಪಟ್ಟಣ: ಯೋಗೇಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ?
ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಿ.ಪಿ.ಯೋಗೇಶ್ವರ ಅವರು, 'ನಾವು ಯಾರಿಗೂ ಪಂಥಹ್ವಾನ ನೀಡಿರಲಿಲ್ಲ. ಆದರೆ, ಕೆಲವರು ನಮ್ಮ ವಿರುದ್ಧ ಷಡ್ಯಂತ್ರ ನಡೆಸಲು ಮುಂದಾದರು. ಆದ್ದರಿಂದ ಇದು ಸೆಡ್ಡು ಹೊಡೆಯುವ ಸಮಾವೇಶ ಎಂದು ನೀವು ತಿಳಿದುಕೊಳ್ಳಬಹುದು' ಎಂದರು.
ಜೆಡಿಎಸ್ ಪ್ರತಿತಂತ್ರ : ಚನ್ನಪಟ್ಟಣದಲ್ಲಿ ಬಿಜೆಪಿ, ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಸಹ ತಂತ್ರ ರೂಪಿಸುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.












Click it and Unblock the Notifications