ರಾಮನಗರ: ಕೆರೆಯಲ್ಲಿ ಮುಳುಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

ರಾಮನಗರ, ಮೇ. 27 : ಕೆರೆಯಲ್ಲಿ ಈಜಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಮನಗರದ ರೇವಣಸಿದ್ದೇಶ್ವರ ಬೆಟ್ಟದ ಹೊಸಕೆರೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಚೇತನ್ (24) ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ಬೋಜನಹೊಸಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಚೇತನ್ ತನ್ನ 8 ಮಂದಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ರೇವಣಸಿದ್ದೇಶ್ವರ ಬೆಟ್ಟದ ಬಳಿಯಿರುವ ಖಾಸಗಿ ರೆಸಾರ್ಟ್ಸ ಗೆ ಆಗಮಿಸಿದ್ದಾರೆ. ಈ ವೇಳೆ ಬೆಟ್ಟದ ಬಳ ಇರುವ ಕೆರೆಯನ್ನು ಕಂಡು ಈಜಲು ತೆರಳಿದ ಸಂಧರ್ಭದಲ್ಲಿ ದುರಂತ ಸಂಭವಿಸಿದೆ.

An engineering student was died in hosakere at ramanagara

ಮೃತ ವಿದ್ಯಾರ್ಥಿಯ ಶವಕ್ಕಾಗಿ ನುರಿತ ಈಜುಗಾರರೊಂದಿಗೆ ಸತತ ಮೂರು ಗಂಟೆಗಳ ಹುಡುಕಾಟ ನಡೆಸಿದ ಪೊಲೀಸರು ನಂತರ ಮೃತದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರಾಮನಗರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.

ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+