ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ ರಕ್ಷಣೆಗೆ ಬೀದಿಗಿಳಿಯುವೆ: ಶಾಸಕಿ ಅನಿತಾ ಕುಮಾರಸ್ವಾಮಿ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಏ. 24: ಬೆಂಗಳೂರಿನ ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅನಿತಾ ಕುಮಾರಸ್ವಾಮಿ ಅವರು, ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ ಕರೋನ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಅನಿತಾ ಕುಮಾರಸ್ವಾಮಿ ಆರೋಪಿಸಿದ್ದಾರೆ.

"ನನ್ನ ಮೇಲೆ ದ್ವೇಷವಿದ್ದರೆ ರಾಮನಗರದ ಮೇಲೆ ತೀರಿಸಿಕೊಳ್ಳಬೇಡಿ"

ಜಿಲ್ಲಾ ಉಸ್ತುವಾರಿ ಸಚಿವ,ಉಪಮುಖ್ಯಮಂತ್ರಿ ಹಾಗೂ ವೈದ್ಯರು ಆಗಿರುವ ಡಾಕ್ಟರ್ ಅಶ್ವಥ್ ನಾರಾಯಣ ಅವರು ಹಾರಿಕೆಯ ಹೇಳಿಕೆಗಳ ನೀಡುವುದು ಬಿಟ್ಟು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿ ಸಲಿ. ಜಿಲ್ಲೆಯ ಜನತೆಯೊಂದಿಗೆ ಚೆಲ್ಲಾಟ ಮಾಡುವುದನ್ನು ಬಿಡಲಿ ಎಂದು ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

government is guilty of shifting Bangaluru Padarayanapura riots said Anita Kumaraswamy

ಸರ್ಕಾರದ ಬೇಜವಾಬ್ದಾರಿತನವನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ತಕ್ಷಣ ರಾಮನಗರ ಮರ್ವಾಡಿ ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಬೀದಿಗಿಳಿದು ಜಿಲ್ಲೆಯ ಜನತೆಯ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹೋರಾಟ ಅನಿವಾರ್ಯ ಎಂದು ಅನಿತಾ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ರಾಮನಗರ ಜೈಲಿನಲ್ಲಿ ಇರಿಸಲಾದ ಕೈದಿಗಳಲ್ಲಿ ಇಬ್ಬರಿಗೆ ಮಾತ್ರವಲ್ಲದೆ ಇತರ ಕೆಲವರಿಗೂ ಕರೋನಾ ಹಬ್ಬಿರುವ ಮಾಹಿತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

English summary
The state government is guilty of evicting the rioters of Bangalore's Padarayanapura riots. Anita Kumaraswamy has issued a press release stating that the people of Ramanagar district should be relieved of the anxiety of the people in the Ramanagara Prison immediately after the displacement of the Padarayanapura riots
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X