ರಾಮನಗರ; ಶಾಸಕಿ ಅನಿತಾ ಕುಮಾರಸ್ವಾಮಿ ಹೋಂ ಕ್ವಾರಂಟೈನ್‌

ರಾಮನಗರ, ಏಪ್ರಿಲ್ 17; ರಾಮನಗರ ಕ್ಷೇತ್ರದ ಜೆಡಿಎಸ್ ಶಾಸಕಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಶನಿವಾರ ಪತ್ರಿಕಾ ಹೇಳಿಕೆಯಲ್ಲಿ ಈ ಕುರಿತು ಅವರು ಮಾಹಿತಿ ನೀಡಿದ್ದಾರೆ. ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ.

ವೈದ್ಯರ ಮುಂದಿನ ಸೂಚನೆ ಬರುವವರೆಗೂ ಅವರು ಹೋಂ ಕ್ವಾರಂಟೈನ್‌ನಲ್ಲೇ ಇರಲಿದ್ದಾರೆ. ಕೋವಿಡ್ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹಕಛೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿದ್ದಾರೆ.

Anitha Kumaraswamy Under Home Quarantine

ಈ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು, ಮುಖಂಡರುಗಳು ಸಹಕರಿಸಬೇಕೆಂದು ಶಾಸಕಿ ಅನಿತಾ ಕುಮಾರಸ್ವಾಮಿಯವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಜನರು ಹಾಗೂ ಕಾರ್ಯರ್ತರಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಕರೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+