ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಕ್ಷದ ಶಿಸ್ತು ಉಲ್ಲಂಘನೆ; ಎಚ್ಚರಿಕೆ ಕೊಟ್ಟ ಡಿಸಿಎಂ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 08: "ಪಕ್ಷದ ರೀತಿ ನೀತಿ ಬಿಟ್ಟು ಕೆಲಸ ಮಾಡುವರಿಗೆ ಪಕ್ಷದಲ್ಲಿ ಉಳಿಗಾಲವಿಲ್ಲ. ಬಿಜೆಪಿಯಲ್ಲಿ ಪಕ್ಷ ಶಾಶ್ವತ ಯಾವುದೇ ವ್ಯಕ್ತಿಗಳಲ್ಲ. ನಾನು ಕೂಡ ಒಬ್ಬ ಕಾರ್ಯಕರ್ತನಾಗಿ ಈ ಮಟ್ಟಕ್ಕೆ ಬಂದಿದ್ಧೇನೆ. ಶಿಸ್ತನ್ನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹೇಳಿದರು.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಅವರು ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಿಲ್ಲೆಯಲ್ಲಿ ಗೆಲವು ಸಾಧಿಸಿರುವ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದರು.

ರಾಮನಗರ; 8405 ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ರಾಮನಗರ; 8405 ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ

"ಬಿಜೆಪಿ ಸಿದ್ದಾಂತಗಳನ್ನು ನೋಡಿ ಜಿಲ್ಲೆಯಲ್ಲಿ ಜನರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಂಬಿಕೆ ಇಟ್ಟು ಮತ ನೀಡಿದ್ದಾರೆ. ಈ ಗೆಲವು ಕಾರ್ಯಕರ್ತರದ್ದು ಹಾಗೂ ಗೆಲವು‌ ಸಾಧಿಸಿದ ಅಭ್ಯರ್ಥಿಗಳದ್ದು" ಎಂದರು.

ರಾಮನಗರ: ಗ್ರಾ.ಪಂ ಚುನಾವಣೆ ಬಹಿಷ್ಕರಿಸಿದ ಸೌಲಭ್ಯ ವಂಚಿತ ಗ್ರಾಮಸ್ಥರುರಾಮನಗರ: ಗ್ರಾ.ಪಂ ಚುನಾವಣೆ ಬಹಿಷ್ಕರಿಸಿದ ಸೌಲಭ್ಯ ವಂಚಿತ ಗ್ರಾಮಸ್ಥರು

Ashwath Narayan Warns Action Against Anti-Party Activities

ಸಂಪುಟ ವಿಸ್ತರಣೆ; ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಉಪ ಮುಖ್ಯಮಂತ್ರಿಗಳು, "ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಮ್ಮ ಕ್ಯಾಪ್ಟನ್. ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಮಾಡುತ್ತಾರೆ" ಎಂದು ಹೇಳಿದರು.

ರಾಮನಗರ: ಕುತೂಹಲ ಕೆರಳಿಸಿದ್ದ ಬಿಡದಿ ಪುರಸಭೆ ಜೆಡಿಎಸ್ ಪಾಲುರಾಮನಗರ: ಕುತೂಹಲ ಕೆರಳಿಸಿದ್ದ ಬಿಡದಿ ಪುರಸಭೆ ಜೆಡಿಎಸ್ ಪಾಲು

ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಡಿಸೆಂಬರ್ 30ರಂದು ಪ್ರಕಟವಾಗಿತ್ತು. ಈ ಕುರಿತು ಡಾ. ಅಶ್ವಥ್ ನಾರಾಯಣ್ ಟ್ವೀಟ್ ಮಾಡಿದ್ದರು.

"ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ಕರ್ನಾಟಕ ಹೊಸ ಇತಿಹಾಸ ಬರೆದಿದೆ. ಜಿಲ್ಲೆಯಲ್ಲಿ ಶೂನ್ಯದಿಂದ ಬಿಜೆಪಿ ಇಂದು 4 ತಾಲೂಕುಗಳಲ್ಲಿ 234ಕ್ಕೂ ಹೆಚ್ಚು ಕಡೆ ಗೆಲುವು ಸಂಪಾದಿಸಿದೆ. ಇದಕ್ಕೆ ಕಾರಣೀಕರ್ತರಾದ ಎಲ್ಲಾ ನಾಯಕರಿಗೂ, ಕಾರ್ಯಕರ್ತರಿಗೂ ಅಭಿನಂದನೆಗಳು" ಎಂದು ಹೇಳಿದ್ದರು.

English summary
Deputy chief minister of karnataka Dr. Ashwath Narayan warned the action against anti-party activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X