ಆನಂದ್ ಸಿಂಗ್ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಗಣೇಶ್ ಅರ್ಜಿ

ಬೆಂಗಳೂರು, ಜನವರಿ 22: ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್​ನಲ್ಲಿ ಶಾಸಕರು ಬಡಿದಾಡಿಕೊಂಡ ಪ್ರಕರಣದ ತನಿಖೆಯನ್ನು ರಾಮನಗರ ಪೊಲೀಸರು ಚುರುಕುಗೊಳಿಸಿದ್ದಾರೆ.

ಈ ನಡುವೆ ಈ ಪ್ರಕರಣದ ಪ್ರಮುಖ ಆರೋಪಿ ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರು ರಾಮನಗರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್ ಸಿಂಗ್ ಅವರು ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರು ಈ ಕೇಸಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಹೇಳಿಕೆಯನ್ನು ನೀಡಿದ್ದರು. ಗಣೇಶ್ ವಿರುದ್ಧ ಆನಂದ್ ಸಿಂಗ್ ಹಾಗೂ ಅವರ ಕುಟುಂಬದವರು ನೀಡಿದ ಹೇಳಿಕೆ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ಹಾಕಿದ್ದಾರೆ.

ಗಣೇಶ್ ಪರ ನಿರೀಕ್ಷಣಾ ಜಾಮೀನಿಗೆ ನ್ಯಾಯವಾದಿ ಹನುಮಂತರಾಯಪ್ಪ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಮೇಶ್‌ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದ್ದು ಕಾರ್ಯಾಚರಣೆ ನಡೆಯುತ್ತಿದೆ.

ಜನವರಿ 19ರ ಶನಿವಾರ ರಾತ್ರಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಮತ್ತು ಆನಂದ್ ಸಿಂಗ್ ನಡುವೆ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಡೆದಾಟ ನಡೆದಿತ್ತು. ಜನವರಿ 20ರ ಭಾನುವಾರ ಬೆಳಗ್ಗೆ ಆನಂದ್ ಸಿಂಗ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿರೀಕ್ಷಣಾ ಜಾಮೀನಿಗೆ ಅರ್ಜಿ

ನಿರೀಕ್ಷಣಾ ಜಾಮೀನಿಗೆ ಅರ್ಜಿ

ಗಣೇಶ್ ಪರ ನಿರೀಕ್ಷಣಾ ಜಾಮೀನಿಗೆ ನ್ಯಾಯವಾದಿ ಹನುಮಂತರಾಯಪ್ಪ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಮೇಶ್‌ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದ್ದು ಕಾರ್ಯಾಚರಣೆ ನಡೆಯುತ್ತಿದೆ.

ಜನವರಿ 19ರ ಶನಿವಾರ ರಾತ್ರಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಮತ್ತು ಆನಂದ್ ಸಿಂಗ್ ನಡುವೆ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಡೆದಾಟ ನಡೆದಿತ್ತು. ಜನವರಿ 20ರ ಭಾನುವಾರ ಬೆಳಗ್ಗೆ ಆನಂದ್ ಸಿಂಗ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯಾವ ಐಪಿಸಿ ಸೆಕ್ಷನ್ ನಲ್ಲಿ ಕೇಸು ದಾಖಲು

ಯಾವ ಐಪಿಸಿ ಸೆಕ್ಷನ್ ನಲ್ಲಿ ಕೇಸು ದಾಖಲು

ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೆ.ಎನ್.ಗಣೇಶ್ ಮೊದಲ ಆರೋಪಿಯಾಗಿದ್ದಾರೆ. ಐಪಿಸಿ ಸೆಕ್ಷನ್ 323, 324, 307, 504 ಹಾಗೂ 506ರ ಅಡಿ ಪ್ರಕರಣವನ್ನು ಪೊಲೀಸರು ದಾಖಲು ಮಾಡಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ಕೊಲೆ ಯತ್ನ ಪ್ರಕರಣ ದಾಖಲು ಮಾಡಲಾಗಿದೆ.

ಬಂಧನ ಸಾಧ್ಯತೆ ಕಡಿಮೆ

ಬಂಧನ ಸಾಧ್ಯತೆ ಕಡಿಮೆ

ಎಫ್‌ಐಆರ್ ದಾಖಲಾದರೂ ಜೆ.ಎನ್.ಗಣೇಶ್ ಅವರನ್ನು ಬಂಧಿಸುವ ಸಾಧ್ಯತೆ ಕಡಿಮೆ ಇದೆ. ಶಾಸಕರ ವಿರುದ್ಧ 323 (ಹಲ್ಲೆ), 324 (ದೊಣ್ಣೆಯಿಂದ ಹಲ್ಲೆ), 307 (ಕೊಲೆಯತ್ನ), 504 (ಉದ್ದೇಶ ಪೂರ್ವಕ ಶಾಂತಿ ಕದಡುವುದು), 506 (ಜೀವ ಬೆದರಿಕೆ) ಪ್ರಕರಣಗಳನ್ನು ದಾಖಲಿಸಲಾಗಿದೆ. ಶಾಸರಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಅತಂತ್ರ ಸ್ಥಿತಿಯಲ್ಲಿ ಕಂಪ್ಲಿ ಶಾಸಕ

ಅತಂತ್ರ ಸ್ಥಿತಿಯಲ್ಲಿ ಕಂಪ್ಲಿ ಶಾಸಕ

ಮತ್ತೊಂದು ಕಡೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಜೆ.ಎನ್.ಗಣೇಶ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ವಿಚಾರಣಾ ಸಮಿತಿ ರಚನೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+