Bengaluru-mysuru expressway: ಪಲ್ಟಿಯಾದ ಕಂಟೇನರ್ ಕೆಳಗೆ ಸಿಲುಕಿ ಚಾಲಕ ನರಳಾಟ

ರಾಮನಗರ, ಸೆಪ್ಟೆಂಬರ್‌, 15: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಆರಂಭವಾದ ದಿನದಿಂದಲೂ ಒಂದಲ್ಲಾವೊಂದು ತೊಂದರೆಗಳು ಆಗುತ್ತಲೇ ಇವೆ. ಮಾರ್ಚ್‌ನಲ್ಲಿ ಲೋಕಾರ್ಪಣೆಗೊಂಡ ಈ ರಸ್ತೆಯಲ್ಲಿ ಹೆಚ್ಚು ಅಪಾಘತಗಳು ಸಂಭವಿಸಿವೆ. ಇದೀಗ ಈ ಹೆದ್ದಾರಿಯಲ್ಲಿ ಟೈರ್ ಸ್ಫೋಟಗೊಂಡು ಸಿಮೆಂಟ್ ತುಂಬಿದ ಕಂಟೇನರ್ ಪಲ್ಟಿಯಾಗಿದ್ದು, ಕಂಟೇನರ್ ಅಡಿ ಸಿಲುಕಿ ಚಾಲಕ‌ ನರಳಾಡಿದ ಘಟನೆ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ ಗ್ರಾಮದ ಬಳಿ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಕಂಟೇನರ್ ಪಲ್ಟಿಯಾಗಿದ್ದು, ಕಂಟೇನರ್ ಅಡಿ ಸಿಲುಕಿ ಚಾಲಕ‌ ನರಳಾಡಿದ್ದಾನೆ. ನಂತರ ಸ್ಥಳೀಯರು ಯುವಕನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಗಳೂರಿನಿಂದ-ಮೈಸೂರಿಗೆ ಸಿಮೆಂಟ್ ಲೋಡ್ ತುಂಬಿಕೊಂಡು ಕಂಟೇನರ್ ಹೋಗುತಿತ್ತು. ಈ ವೇಳೆ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಕಂಟೇನರ್ ಹೈವೆಯಿಂದ ಸರ್ವಿಸ್ ರಸ್ತೆಗೆ ಉರುಳಿದೆ.

Bengaluru-mysuru expressway: Driver was stucked under overturned container near channapatna

ಅಪಘಾತದ ರಭಸಕ್ಕೆ ಲಾರಿ ಇಂಜಿನ್ ಮತ್ತು ಕಂಟೇನರ್ ಇಬ್ಬಾಗವಾಗಿದೆ. ಹೈವೆಯಿಂದ ಸರ್ವಿಸ್ ರಸ್ತೆಗೆ ಕಂಟೇನರ್ ಉರುಳಿದ್ದು, ಇಂಜಿನ್ ಕೆಳಗೆ ಸಿಲುಕಿದ ಚಾಲಕನ್ನು ಸ್ಥಳೀಯರು, ಪೊಲೀಸರು ರಕ್ಷಿಸಲು ಹರಸಾಹಸಪಟ್ಟಿದ್ದಾರೆ. ಸದ್ಯ ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿ ಚಾಲಕನನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.

KSRTC ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

ಸಾರಿಗೆ (KSRTC) ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ವೇಳೆ ಬಸ್‌ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಪಾರ್ವತಮ್ಮ (45), ಮರಾಯಚೂರು ಜಿಲ್ಲೆಯ ಮಸ್ಕಿ ಮೂಲದ ರಮೇಶ್ (40) ಸಾವನ್ನಪ್ಪಿದವರಾಗಿದ್ದಾರೆ. ಮತ್ತಿಬ್ಬರು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿತ್ತು.

ಇನ್ನು ಘಟನೆಯಲ್ಲಿ ಬಸ್‌ನಲ್ಲಿದ್ದ 6ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಳಿಕ ಸ್ಥಳೀಯರ ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ನಿಂತಿದ್ದ ಲಾರಿಗೆ ಕಾರು ಡಿಕ್ಕಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಕಾರು ಹಿಂಬಂದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು.

ಶಂಶುದ್ದೀನ್ (40), ಮಲ್ಲಿಕಾ (37), ಖಲೀಲ್ (42), ತಬ್ರೇಜ್ (13) ಇವರು ಭೀಕರ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಇನ್ನು ರೆಹಾನ್ (14), ರೆಹಮಾನ್ (12), ಮುಬಿ (9) ಎನ್ನುವ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು

ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+