Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಕಾರು ಅಪಘಾತ; ನಾಲ್ವರು ಸಾವು
Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣ ಆದಗಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಈ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಕಾರು ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಹಾಗಾದ್ರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನದಲ್ಲಿ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಸಮೀಪ ಸಂಭವಿಸಿದೆ.
ಕೆಆರ್ ಪೇಟೆ ಮೂಲದ ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಚಾಲಕ ಸಚಿನ್(27) ಅಪಘಾತದಲ್ಲಿ ಮೃತಪಟ್ಟವರು.

ಮೈಸೂರಿನಿಂದ ಬೆಂಗಳೂರಿನ ಕಡೆಗೆ ಪ್ರಯಾಣ ಮಾಡುತ್ತುದ್ದ ವೇಳೆ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಎಕ್ಸ್‌ಪ್ರೆಸ್‌ವೇನ ತಡೆಗೋಡೆಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಇನ್ನು ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications