Bengaluru-Mysuru Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ , ಮೂವರು ಸಾವು, 7 ಮಂದಿಗೆ ಗಂಭೀರ ಗಾಯ

ಚನ್ನಪಟ್ಟಣ, ಫೆಬ್ರವರಿ 18: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಆರಂಭದಲ್ಲಿ ಭಾರೀ ಅಪಘಾತಗಳು ಸಂಭವಿಸುತ್ತಲೇ ಇದ್ದವು. ಆದರೆ ಇತ್ತೀನ ದಿನಗಳಲ್ಲಿ ಈ ಹೆದ್ದಾರಿಯಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು. ಆದರೆ ಇದೀಗ ಮತ್ತೆ ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ವೇಳೆ ಮೂವರು ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಬೆಂಗಳೂರಿನಿಂದ ಮೈಸೂರಿನ ಕಡೆಗೆ ಟಿಟಿ ವಾಹನ ಹೋಗುತ್ತಿದ್ದು, ಈ ವೇಳೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಟಿಟಿ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದ್ದು, ಈ ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

 Bengaluru-Mysuru Expressway: Terrible accident on Highway, 3 death, 7 seriously injured

ಇನ್ನಯ ಮೃತರನ್ನು ಮೈಸೂರು ಮೂಲದ ಸೋಮಲಿಂಗಪ್ಪ (70), ಸೋಮಪ್ಪ (68) ಮತ್ತು ರಾಜೇಶ್ವರಿ ದೇಸಾಯಿ (57) ಎಂದು ಗುರುತಿಸಲಾಗಿದೆ. ಗಾಯಗೊಂಡವರು ಮೈಸೂರು ಮೂಲದ ಚಾಲಕ ಪ್ರಸನ್ನ, ಕುಮಾರಸ್ವಾಮಿ, ನಿತಿನ್, ಲಕ್ಷ್ಮಿ, ಚೂಡಾರತ್ನ, ಲೀಲಾವತಿ ಮತ್ತು ನಮ್ರತಾ ಎಂದು ಗುತುತಿಸಲಾಗಿದೆ. ಇನ್ನು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+