ಕುಮಾರಣ್ಣನ ತವರು ಜಿಲ್ಲೆಯಲ್ಲಿ ಬಿಜೆಪಿ ಸಂಭ್ರಮ
ರಾಮನಗರ, ಜುಲೈ 29: ಇತ್ತ ಸದನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತುಪಡಿಸುತ್ತಿದ್ದಂತೆಯೇ, ಅತ್ತ, ಎಚ್.ಡಿ. ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿ ಸಾಗಿತು.
ರಾಮನಗರದ ಐಜೂರು ವೃತ್ತದಲ್ಲಿ ಯಡಿಯೂರಪ್ಪ ವಿಶ್ವಾಸಮತ ಸಾಬೀತು ಪಡಿಸಿದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರ ರಾಮನಗರದಲ್ಲಿ ಬಿಜೆಪಿಯೆಡೆಗೆ ನೆಲೆ ಇಲ್ಲದಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಿದ್ದಂತೆಯೇ, ಅಲ್ಲಲ್ಲಿ ಯಡಿಯೂರಪ್ಪ ಅವರ ಗೆಲುವನ್ನು ಸೂಚಿಸುವ ಬ್ಯಾನರ್ ಗಳು ಕಾಣಿಸಿಕೊಂಡಿದ್ದವು.

ಇದೀಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಜೊತೆಜೊತೆಗೆ ವಿಶ್ವಾಸಮತವನ್ನು ಸಾಬೀತುಪಡಿಸಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕಾರ್ಯಕರ್ತರು, ಮುಖಂಡರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.












Click it and Unblock the Notifications