ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಪಾಲ ಬೆಟ್ಟಕ್ಕೆ ಬಿಜೆಪಿ ನಿಯೋಗ ಭೇಟಿ

|
Google Oneindia Kannada News

ರಾಮನಗರ, ಜನವರಿ 2: ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡುವ ವಿಚಾರ ವಿವಾದವನ್ನು ಹುಟ್ಟುಹಾಕುವುದರ ಜೊತೆಗೆ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಈಗ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ಕಾಮಗಾರಿ ಸ್ಥಗಿತಗೊಂಡಿದ್ದು, ಎಲ್ಲ ಕೆಲಸಗಾರರು ಅಲ್ಲಿಂದ ಬೇರೆಡೆ ಹೋಗಿದ್ದಾರೆ. ಅಲ್ಲದೆ, ಈ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸುವ ಬಗ್ಗೆ ವಿವಾದ ಉಂಟಾದ ಕಾರಣ ಸುತ್ತಲೂ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಬೆಂಗಳೂರು, ತುಮಕೂರಿಗೆ ಮೋದಿ, ಹಲವೆಡೆ ಸಂಚಾರ ಮಾರ್ಗ ಬದಲಾವಣೆಬೆಂಗಳೂರು, ತುಮಕೂರಿಗೆ ಮೋದಿ, ಹಲವೆಡೆ ಸಂಚಾರ ಮಾರ್ಗ ಬದಲಾವಣೆ

ಈ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶಗಳು ಕೇಳಿಬಂದಿತ್ತು. ಜೊತೆಗೆ ಕಾಮಗಾರಿಯನ್ನೂ ಕೈಬಿಡಲಾಗಿತ್ತು.

BJP Deligates Will Visit Kapala Betta Today

ಇಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿ ಹಲವು ಬಿಜೆಪಿ ಮುಖಂಡರು ಕನಕಪುರಕ್ಕೆ ಭೇಟಿ ನೀಡಿ ಏಸು ಪ್ರತಿಮೆ ನಿರ್ಮಾಣದ ಸ್ಥಳವನ್ನು ಪರಿಶೀಲಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬಿಜೆಪಿ ನಿಯೋಗ ಕಪಾಲ ಬೆಟ್ಟಕ್ಕೆ ತೆರಳಲಿದೆ.

ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಏಸು ಪ್ರತಿಮೆಯ ಶಂಕುಸ್ಥಾಪನೆ ಮಾಡುವ ಮೂಲಕ ಆಡಳಿತ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೇ ವೇಳೆ ಕನಕಪುರದಲ್ಲಿ ಕ್ಲೀನಿಂಗ್ ಆರಂಭಿಸುವುದಾಗಿ ಮಾಡುವುದಾಗಿ ಡಿಸಿಎಂ ಅಶ್ವತ್ಥ​ ನಾರಾಯಣ ಸೂಚನೆ ನೀಡಿದ್ದರು.

ಕಪಾಲಬೆಟ್ಟ ಅಭಿವೃದ್ಧಿ ಸಮಿತಿಗೆ ಮಂಜೂರಾಗಿದ್ದ 10 ಎಕರೆ ಜಾಗದಲ್ಲಿ ಒಂದು ಧರ್ಮದ ದೇವರ ಪ್ರತಿಮೆ ನಿರ್ಮಾಣ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಕ್ರಿಸ್​ಮಸ್ ವೇಳೆ ಅದರ ಶಂಕುಸ್ಥಾಪನೆ ನೆರವೇರಿಸಿದ್ದ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿತ್ತು.

English summary
Former Minister DK Shivakumar Controversy move, BJP Delegates visiting Kanakapur hill Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X