ಬಿಜೆಪಿ ಪರಿವರ್ತನಾ ಯಾತ್ರೆಗೆ ಕಾಲೇಜು ವಿದ್ಯಾರ್ಥಿಗಳ ಬಳಕೆ
ಮಾಗಡಿ, ಜನವರಿ 17: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಲಾಗಿದೆ ಎನ್ನಲಾಗಿದೆ.
ಮಾಗಡಿಯಲ್ಲಿ ಪರಿವರ್ತನಾ ಯಾತ್ರೆ ಪ್ರಾರಂಭಕ್ಕೂ ಮುನ್ನಾ ಯಡಿಯೂರಪ್ಪ ಅವರು ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ವೇಳೆ ಕಾಲೇಜು ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.
ಪಟ್ಟಣದ ಐಟಿಐ ಸಂಸ್ಥೆಯೊಂದರ ವಿದ್ಯಾರ್ಥಿಗಳು ಸಮವಸ್ತ್ರದ ಮೇಲೆಯೇ ಬಿಜೆಪಿ ಚಿಹ್ನೆಯುಳ್ಳ ವಸ್ತ್ರ ಸುತ್ತಿಕೊಂಡಿರುವುದು ಕಂಡು ಬಂದಿತು. ಅಲ್ಲದೆ ಯಾತ್ರೆಗೆ ಬಂದಿದ್ದ ವಿದ್ಯಾರ್ಥಿಗಳ ಹೆಸರನ್ನೂ ಪಟ್ಟಿ ಬಿಜೆಪಿ ಕಾರ್ಯಕರ್ತರೊಬ್ಬರು ಪಟ್ಟಿ ಮಾಡಿಕೊಳ್ಳುತ್ತಿದ್ದರು.

ಕೆಂಪೇಗೌಡ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಯಡಿಯೂರಪ್ಪ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕೋಟೆ ಮೈದಾನಕ್ಕೆ ಕರೆದೊಯ್ಯಲಾಯಿತು ಆಗಲೂ ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಮವಸ್ತ್ರ ಧರಿಸಿಯೇ ಭಾಗವಹಿಸಿದ್ದರು.












Click it and Unblock the Notifications