ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರಕಾರದ ಕಡೆಗಣನೆ ಖಂಡಿಸಿ ನ.15 ರಂದು ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ನವೆಂಬರ್ 9: ಬ್ರಾಹ್ಮಣ ಸಮುದಾಯವನ್ನು ಕೇವಲ ಮತಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ, ಸಮುದಾಯಕ್ಕೆ ಯಾವುದೇ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿರುವ ಜಿಲ್ಲಾ ಬ್ರಾಹ್ಮಣ ಸಭಾ ನೇತೃತ್ವದಲ್ಲಿ ಇದೇ ತಿಂಗಳ 15 ರಂದು ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಈ ಸಂಬಂಧ ಬೊಂಬೆನಾಡು ಚನ್ನಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬ್ರಾಹ್ಮಣ ಸಮುದಾಯದ ಮುಖಂಡರು, ''ಬ್ರಾಹ್ಮಣ ಸಮುದಾಯಕ್ಕೆ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದು, ನವೆಂಬರ್ 15 ರಂದು ಬೆಳಗ್ಗೆ 10:30ಗೆ ರಾಮನಗರ ಕ್ಷೇತ್ರ ಆರಾಧ್ಯ ದೇವತೆ ಆದ ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ ತದನಂತರ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ತಲುಪಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು'' ಎಂದು ಮಾಹಿತಿ ಹಂಚಿಕೊಂಡರು.

ಬಿಡದಿ: ಜಪಾನ್‌ ಮೂಲದ ಕಂಪನಿ ಬಂದ್‌; ಆಡಳಿತ ಮಂಡಳಿಯಿಂದ ಸ್ಪಷ್ಟನೆಬಿಡದಿ: ಜಪಾನ್‌ ಮೂಲದ ಕಂಪನಿ ಬಂದ್‌; ಆಡಳಿತ ಮಂಡಳಿಯಿಂದ ಸ್ಪಷ್ಟನೆ

ಕೇಂದ್ರ ಸರ್ಕಾರ ಬ್ರಾಹ್ಮಣ ಸಮುದಾಯಕ್ಕೆ 10% ಮೀಸಲಾತಿಯನ್ನು ಜಾರಿ ಮಾಡಿದೆ. ಅದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿರುವ ಮೀಸಲಾತಿಯನ್ನು ಜಾರಿ ಮಾಡಲು ವಿಫಲವಾಗಿದೆ. ಕಳೆದ ಎರಡು ವರ್ಷಗಳಿಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕೊಡುತ್ತಿಲ್ಲ, ದೇವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪುರೋಹಿತರಿಗೆ ಸರ್ಕಾರ ಯಾವುದೇ ಸೌಲಭ್ಯವನ್ನು ನೀಡುತ್ತಿಲ್ಲ‌ ಎಂದು ಬ್ರಾಹ್ಮಣ ಸಮುದಾಯದ ಮುಖಂಡರು ಆರೋಪಿಸಿದರು.

Brahmin community to protest on November 15 Demanding 10% Reservation and other Facilities

ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು ಹೆಚ್ಡಿಕೆ

ಬ್ರಾಹ್ಮಣ ಸಮಾಜದ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಮಯ್ಯ ಮಾತನಾಡಿ "ಬ್ರಾಹ್ಮಣ ಸಮಾಜ ಬಹಳ ಹಿಂದಿನಿಂದಲೂ ಬಿಜೆಪಿಯನ್ನು ಬೆಂಬಲಿಸುತ್ತಿದೆ. ಅದರೆ ಬಿಜೆಪಿ ನೇತೃತ್ವದ ಸರ್ಕಾರ ಬ್ರಾಹ್ಮಣರನ್ನು ಕಡೆಗಣಿಸಿದೆ. 10% ಬ್ರಾಹ್ಮಣರು ಬೆಂಬಲಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರ ಅವಧಿಯಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ , ನಿಗಮಕ್ಕೆ 25 ಕೋಟಿ ಅನುದಾನ ನೀಡಿದರು ಎಂದು ಎಚ್‌ಡಿಕೆಯನ್ನು ಸ್ಮರಿಸಿದರು.

ಇನ್ನೂ ಬ್ರಾಹ್ಮಣ ಸಮುದಾಯ 90% ಮತ ಪಡೆದ ಬಿಜೆಪಿ ಸರ್ಕಾರ ತಮ್ಮ ಅಧಿಕಾರಕ್ಕೆ ಬಂದ ನಾಲ್ಕು ವರ್ಷದ ಅವಧಿಯಲ್ಲಿ ಕೇವಲ 5 ಕೋಟಿ ಮಾತ್ರ ಅನುದಾನ ನೀಡಿದೆ. ಸರ್ಕಾರದ ನೀಡಿದ ಕಡಿಮೆ ಅನುದಾನದಲ್ಲಿ ಬ್ರಾಹ್ಮಣ ಸಮುದಾಯದ ಅಭಿವೃದ್ಧಿ ಸಾಧ್ಯವೇ? ‌ಅಲ್ಲದೇ ಕಳೆದ ಎರಡು ವರ್ಷಗಳಿಂದ ಬ್ರಾಹ್ಮಣ ಸಮುದಾಯದ ವಿಧ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

English summary
Brahmin community to protest on November 15 demanding 10% reservation and other facilities in Ramanagara.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X