Get Updates
Get notified of breaking news, exclusive insights, and must-see stories!

ಹರ್ಷ ಕುಟುಂಬಕ್ಕೆ 1 ಲಕ್ಷ ನೆರವು ಘೋಷಣೆ ಮಾಡಿದ ಯೋಗೇಶ್ವರ್

ರಾಮನಗರ, ಫೆಬ್ರವರಿ 23; ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಹರ್ಷ ಕುಟುಂಬಕ್ಕೆ 1 ಲಕ್ಷ ರೂಪಾಯಿ ನೆರವು ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್ ಹೇಳಿದರು.

ಹರ್ಷ ಕೊಲೆ ಖಂಡಿಸಿ ರಾಮನಗರದಲ್ಲಿ ಹಿಂದೂ ಜಾಗರಣಾ ವೇದಿಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಿ. ಪಿ. ಯೋಗೇಶ್ವರ್, ಹರ್ಷ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಘೋಷಣೆ ಮಾಡಿದರು.

"ಸಮಾಜದಲ್ಲಿ ಬೆಳಕು ಕಾಣಬೇಕಿದ್ದ ಒಬ್ಬ ಯುವಕನನ್ನು ಕೊಲೆ ಮಾಡಲಾಗಿದೆ. ಸರ್ಕಾರ ಕೂಡ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದೆ. ನಾನು ವೈಯಕ್ತಿಕವಾಗಿ ಹರ್ಷ ಅವರ ಕುಟುಂಬಕ್ಕೆ 1 ಲಕ್ಷ ನೀಡುತ್ತೇನೆ" ಎಂದರು.

C. P. Yogeshwar Announces Rs 1 Lakh Compensation For Harsha Family

"ಅಮಾಯಕ ಯುವಕರಲ್ಲಿ ಭಯ ಹುಟ್ಟಿಸಲು ಕೊಲೆ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಹಿಂದೂ ಧರ್ಮದ ಪರವಾಗಿ ಕೆಲಸ ಮಾಡುತ್ತಿದ್ದ ಯುವಕ ಹರ್ಷ ಕೊಲೆ ಮಾಡುವ ಮೂಲಕ ಹಿಂದ ಪರವಾದ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗಿದೆ. ಸರ್ಕಾರ ಈ ವಿಚಾರದಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನ ತಗೆದುಕೊಳ್ಳಲಿದೆ" ಎಂದು ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

"ನಾವು ನೀಡುವ ಸಣ್ಣ ನೆರವು ನೀಡುವ ಮೂಲಕ ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳಬಹುದು. ಆದರೆ ಅವರ ದುಃಖ ಬರಿಸಲು ಸಾಧ್ಯವಿಲ್ಲ. ಹಿಂದು ಧರ್ಮದ ಪರ ಹೋರಾಟ ಮಾಡುತ್ತಿರುವ ಕಾರ್ಯಕರ್ತರನ್ನು ಬೆಂಬಲಿಸುವ ನಿಟ್ಟಿನಲ್ಲಿ ಹೋರಾಟದಲ್ಲಿ ಭಾಗವಹಿಸಿದ್ದೇನೆ. ಈ ಮೂಲಕ ಕೊಲೆಗಡುಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎನ್ನುವುದು ನಮ್ಮ ಒತ್ತಾಯ" ಎಂದರು.

ಮೆರವಣಿಗೆಗೆ ಅಡ್ಡಿಪಡಿಸಿದ ಪೋಲಿಸರು; ಹರ್ಷ ಕೊಲೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರು ಪೇಟೆ ಬೀದಿಯಲ್ಲಿ ಮೆರವಣಿಗೆಗೆ ಮುಂದಾದಾಗ ಪೋಲಿಸರು ಅಡ್ಡಿಪಡಿಸಿದ ಕಾರಣ ಕೆಲ ಕಾಲ ಪೋಲಿಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.

ನಗರದ ಐಜೂರು ವೃತ್ತದಲ್ಲಿ ಜಮಾವಾಣೆಯಾದ ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರು ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಮತೀಯ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿದರು.

ಹಿಂದು ಪರ ಹೋರಾಟವನ್ನು ಹತ್ತಿಕ್ಕಲು ಹರ್ಷನನ್ನು ಕೊಲೆ ಮಾಡಲಾಗಿದೆ. ಸರ್ಕಾರ ಈ ಕೂಡಲೇ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು. ಅಲ್ಲದೇ ಕೆಲ ಕಾಲ ರಸ್ತೆಯಲ್ಲೇ ಮೌನವಾಗಿ ನಿಂತು ಶ್ರದ್ಧಾಂಜಲಿ ಸಲ್ಲಿಸಿದರು.

ನೂರಾರು ಸಂಖ್ಯೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಎಂ.ಜಿ.ರಸ್ತೆ ಮೂಲಕ ಮೆರವಣಿಗೆ ನಡೆಸಿದರು. ಅಂತಿಮವಾಗಿ ಜಿಲ್ಲಾ ಪೋಲಿಸ್ ಭವನದ ಬಳಿ ಮೆರವಣಿಗೆ ಕೊನೆಯಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+