ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಸಿ.ಪಿ.ಯೋಗೇಶ್ವರ್!
Recommended Video

ರಾಮನಗರ, ಏಪ್ರಿಲ್ 22: ಕಾಂಗ್ರೆಸ್ ಪಕ್ಷಕ್ಕೆ ಕೈಕೊಟ್ಟು, ಕಮಲ ಪಾಳಯಕ್ಕೆ ಜಿಗಿದಿದ್ದ ಸಿ.ಪಿ.ಯೋಗೇಶ್ವರ್ ಹಳೆ ಮೈಸೂರು ಪ್ರಾಂತ್ಯದಲ್ಲಿ ಕಮಲ ಅರಳಿಸುವ ಮಾತನಾಡಿದ್ದರು. ಆದರೆ ಚುನಾವಣೆಗೆ ಮೊದಲೇ ಚನ್ನಪಟ್ಟಣ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ ಎನ್ನುವ ವಂದತಿ ಹಬ್ಬಿದೆ.
ಹೌದು, ಈಗಾಗಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ಸಿ.ಪಿ.ಯೋಗೇಶ್ವರ್, ಮಂಡ್ಯ ಮತ್ತು ಮದ್ದೂರು ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರನ್ನು ಮಣಿಸಲು ಬಂಡಾಯ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬಿಜೆಪಿ ಅಭ್ಯರ್ಥಿಯಾದರೆ ಅಲ್ಪಸಂಖ್ಯಾತ ಮುಸ್ಲಿಂ ಮತಗಳು ಮತ್ತು ಅಹಿಂದ ಮತಗಳು ದೊರೆಯುವುದು ಅನುಮಾನ. ಒಂದು ವೇಳೆ ಪಕ್ಷೇತರವಾಗಿ ಚುನಾವಣಾ ಕಣಕ್ಕಿಳಿದರೆ ಮುಸ್ಲಿಂ ಮತ್ತು ಅಹಿಂದ ಮತಗಳು ಕೈಹಿಡಿಯುತ್ತವೆ ಎನ್ನುವ ನಂಬಿಕೆಯಲ್ಲಿದ್ದಾರಂತೆ ಸಿಪಿವೈ.

2013ರ ವಿಧಾನಸಭಾ ಚುನಾವಣೆಯಲ್ಲೂ ನಾಮಪತ್ರ ಸಲ್ಲಿಸುವ ಕೊನೆಯ ಹಂತದವರೆಗೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂಬ ಗುಟ್ಟು ಬಿಟ್ಟುಕೊಡದ, ಅವರ ನಡೆಯನ್ನು ಹತ್ತಿರದಿಂದ ಬಲ್ಲ ಶಾಸಕರ ಆಪ್ತರು ಮತ್ತು ಕಾರ್ಯಕರ್ತರು ಇದೀಗ ಮತ್ತೆ ಗೊಂದಲದಲ್ಲಿದ್ದಾರೆ.

ಜೆಡಿಎಸ್ ನಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಅಂತೆಯೇ ಕಾಂಗ್ರೆಸ್ ನಿಂದ ಸಾರಿಗೆ ಸಚಿವ ಎಚ್. ಎಂ.ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಎರಡು ಪಕ್ಷಗಳಿಂದ ಪ್ರಬಲ ಅಭ್ಯರ್ಥಿಗಳು ಕಣದಲ್ಲಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವುದು ಖಚಿತವಾಗಿದೆ.












Click it and Unblock the Notifications