ರಾಮನಗರ; ಭೀಕರ ಅಪಘಾತ 3 ಸಾವು, 6 ಜನರಿಗೆ ಗಾಯ
ರಾಮನಗರ, ಜನವರಿ 09 : ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮಂಜಾನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ಈ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುದೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿದ್ದವರು ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದರು. ಕಾರಿನಲ್ಲಿದ್ದವರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕಾರಿನಲ್ಲಿದ್ದವರು ಮಂಗಳೂರು ಮೂಲದವರು ಎಂಬ ಮಾಹಿತಿ ಸಿಕ್ಕಿದೆ. ಕಾರಿನ ಚಾಲಕನ ನಿದ್ರೆ ಮಂಪರಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಶವಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತರಲಾಗಿದೆ.












Click it and Unblock the Notifications