ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ; ಭೀಕರ ಅಪಘಾತ 3 ಸಾವು, 6 ಜನರಿಗೆ ಗಾಯ

|
Google Oneindia Kannada News

ರಾಮನಗರ, ಜನವರಿ 09 : ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಮಂಜಾನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ಈ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ರಸ್ತೆ ನಟ್ಟನಡುವೆ ಜನರ ಮಧ್ಯೆಯೇ ಆರಾಮಾಗಿ ನಡೆದಾಡಿದ ಚಿರತೆರಸ್ತೆ ನಟ್ಟನಡುವೆ ಜನರ ಮಧ್ಯೆಯೇ ಆರಾಮಾಗಿ ನಡೆದಾಡಿದ ಚಿರತೆ

ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುದೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಎಂಟಿಸಿ ಬಸ್ ಬ್ರೇಕ್ ಫೇಲ್, ಸರಣಿ ಅಪಘಾತ: ಓರ್ವ ಸಾವುಬಿಎಂಟಿಸಿ ಬಸ್ ಬ್ರೇಕ್ ಫೇಲ್, ಸರಣಿ ಅಪಘಾತ: ಓರ್ವ ಸಾವು

road accident

ಕಾರಿನಲ್ಲಿದ್ದವರು ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದರು. ಕಾರಿನಲ್ಲಿದ್ದವರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸಿಎಂ ಯಡಿಯೂರಪ್ಪ ಬೆಂಗಾವಲು ವಾಹನ ಸರಣಿ ಅಪಘಾತಸಿಎಂ ಯಡಿಯೂರಪ್ಪ ಬೆಂಗಾವಲು ವಾಹನ ಸರಣಿ ಅಪಘಾತ

ಕಾರಿನಲ್ಲಿದ್ದವರು ಮಂಗಳೂರು ಮೂಲದವರು ಎಂಬ ಮಾಹಿತಿ ಸಿಕ್ಕಿದೆ. ಕಾರಿನ ಚಾಲಕನ ನಿದ್ರೆ ಮಂಪರಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಶವಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತರಲಾಗಿದೆ.

English summary
3 killed in a road accident at Magadi, Ramanagara district on January 9, 2020 morning. Car lost control and hit to the poll. Kuduru police visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X