Cauvery dispute: ಕಣಮಿಣಿಕೆ ಟೋಲ್ ಬಳಿ ಕನ್ನಡಪರ ಸಂಘಟನೆಗಳ ಸಮರ, ಮಹಿಳೆಯರಿಂದ ಉರುಳು ಸೇವೆ
ರಾಮನಗರ, ಸೆಪ್ಟೆಂಬರ್, 13: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ಸಮರಗಳು ನಡೆಯುತ್ತಿವೆ. ಅದೇ ರೀತಿ ಇಂದು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಕಣಮಿಣಿಕೆ ಟೋಲ್ ಬಳಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲವನ್ನು ಮಾಡಿದ್ದಾರೆ.
ಈ ಕೂಡಲೇ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಬೇಕೆಂದು ಕಣಮಿಣಿಕ್ ಟೋಲ್ ಬಳಿ ಹೆದ್ದಾರಿಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ ಮಹಿಳೆಯರು ಹೈವೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಲ್ಲದೆ, ಬಿಂದಿಗೆ ಹಿಡಿದು 420 ಸಿದ್ದರಾಮಯ್ಯ, 420 ಡಿ.ಕೆ.ಶಿವಕುಮಾರ್ ಸರ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಕಣಮಿಣಕಿ ಟೋಲ್ ಬಳಿ ಹೆದ್ದಾರಿ ತಡೆ ಮಾಡಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಸರ್ಕಾರ ಪೊಲೀಸರನ್ನು ಬಳಸಿ ಹೋರಾಟ ಹತ್ತಿಕ್ಕಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಜಿಲ್ಲೆಯಲ್ಲಿ ಮಳೆ ಕೊರತೆ
ಈಗಾಗಲೇ ಐತಿಹಾಸಿಕ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸರ್ವ ರೀತಿಯ ತಯಾರಿಗಳು ನಡೆಯುತ್ತಿವೆ. ಅರಮನೆ ಅಂಗಳ ಪ್ರವೇಶಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಯ ಮೊದಲ ತಂಡ ತಾಲೀಮನ್ನು ಆರಂಭಿಸಿವೆ. ಹೀಗಿರುವಾಗಲೇ ರಾಜ್ಯವನ್ನು ಬರ ಕಾಡಲಾರಂಭಿಸಿದ್ದು, ಬರದ ನಡುವೆ ಅದ್ಧೂರಿ ದಸರಾ ಆಚರಣೆ ಸಾಧ್ಯನಾ ಎಂಬ ಪ್ರಶ‍್ನೆಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.
ಹಾಗೆನೋಡಿದರೆ ಬರ ಕಾಣಿಸಿದಾಗಲೆಲ್ಲ ಮೈಸೂರು ದಸರಾ ಸರಳವಾಗಿ ನಡೆದ ನಿದರ್ಶನಗಳಿವೆ. ಅದನ್ನು ಮೀರಿ ಈ ಬಾರಿ ಅದ್ಧೂರಿಯಾಗಿ ದಸರಾ ಆಚರಣೆಯನ್ನು ಸರ್ಕಾರ ಮಾಡುತ್ತಾ ಎಂಬುದೇ ಕುತೂಹಲಕಾರಿಯಾಗಿದೆ. ಕಳೆದ ಐದು ವರ್ಷಗಳಲ್ಲಿ ಉತ್ತಮವಾಗಿ ಮಳೆಯಾಗಿತ್ತು. ಕೊರೊನಾದಿಂದಾಗಿ ಒಂದೆರಡು ವರ್ಷಗಳ ಕಾಲ ದಸರಾ ಆಚರಣೆಗೆ ತೊಂದರೆಯಾಗಿತ್ತು. ಹೀಗಾಗಿ ಸರಳ ಮತ್ತು ಸಂಪ್ರದಾಯಬದ್ಧವಾಗಿ ದಸರಾ ನಡೆದಿತ್ತು. ಆದರೆ ಕಳೆದ ವರ್ಷ ಅದೆಲ್ಲವನ್ನು ಮರೆತು ದಸರಾ ಆಚರಣೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಅಂತಹ ಪರಿಸ್ಥಿತಿ ಈ ವರ್ಷ ಇದೆಯಾ?
ಈ ಬಾರಿಯ ಮುಂಗಾರು ದುರ್ಬಲವಾದ ಪರಿಣಾಮ ಹಳೇ ಮೈಸೂರು ವ್ಯಾಪ್ತಿಯ ಕೆರೆಕಟ್ಟೆಗಳು, ಜಲಾಶಯಗಳು ಭರ್ತಿಯಾಗಲೇ ಇಲ್ಲ. ಮಳೆಯನ್ನು ನಂಬಿ ವ್ಯವಸಾಯ ಮಾಡುವ ರೈತರು ಮತ್ತು ಕೆರೆಕಟ್ಟೆ, ಜಲಾಶಯಗಳ ನೀರನ್ನು ಆಶ್ರಯಿಸಿ ಬೆಳೆಬೆಳೆಯುವ ಕೃಷಿಕರು ಕೈಕಟ್ಟಿ ಕೂರುವಂತಾಗಿದೆ. ಮಳೆ ಸುರಿಯಬಹುದು, ಜಲಾಶಯಗಳಿಂದ ನೀರು ಹರಿಸಬಹುದು ಎಂಬ ನಂಬಿಯಿಂದ ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ಜೊತೆಯಲ್ಲಿಯೇ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಜಲಾಶಯಗಳು ಬರಿದಾಗಿವೆ. ಕುಡಿಯಲು ನೀರಿಲ್ಲದ ಪರಿಸ್ಥಿತಿ ಇರುವಾಗ ಕೃಷಿ ತಾನೆ ಹೇಗೆ ಮಾಡುವುದು? ಕೃಷಿ ಮಾಡಿಲ್ಲವೆಂದರೆ ರೈತರ ಜೀವನ ನಡೆಯುವುದು ಹೇಗೆ?
ರಾಜ್ಯದ 196 ತಾಲೂಕುಗಳಲ್ಲಿ ಬರ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಮತ್ತು ತಿ.ನರಸೀಪುರ ತಾಲೂಕಿನಲ್ಲಿಯೂ ಬರದ ಛಾಯೆಯಿದ್ದು, ಇವೆರಡೂ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ಎಂಬ ಒತ್ತಾಯಗಳು ಕೇಳಿ ಬರುತ್ತಿವೆ. ಸರ್ಕಾರ ಇಷ್ಟರಲ್ಲಿಯೇ ಬರ ಘೋಷಣೆ ಮಾಡಬೇಕಾಗಿತ್ತು. ಆದರೆ ಯಾವುದೇ ಘೋಷಣೆ ಮಾಡಿಲ್ಲ. ಆದರೂ ಇವತ್ತಲ್ಲ ನಾಳೆ ಬರಘೋಷಣೆ ಮಾಡಲೇ ಬೇಕಾಗುತ್ತದೆ. ಬರ ಘೋಷಣೆ ಬಳಿಕ ಅದ್ಧೂರಿ ದಸರಾ ನಡೆಸಲು ಸಾಧ್ಯನಾ? ಹೀಗೊಂದು ಪ್ರಶ್ನೆ ಬಿಟ್ಟು ಬಿಡದೆ ಕಾಡುತ್ತಿದೆ.
ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಲೇ ಬರುತ್ತಿದ್ದಾರೆ. ಸದ್ಯ ನೀರು ಬಿಡುವುದನ್ನು ನಿಲ್ಲಿಸಲಾಗಿತ್ತಾದರೂ ಮತ್ತೆ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಇದು ರೈತರು ಮಾತ್ರವಲ್ಲದೆ, ಹಳೆ ಮೈಸೂರು ಭಾಗದ ಮತ್ತು ಕಾವೇರಿ ನೀರನ್ನು ಆಶ್ರಯಿಸಿರುವ ಜನರನ್ನು ಆತಂಕಕ್ಕೆ ತಳ್ಳಿದೆ. ಇದಕ್ಕೊಂದು ತಾರ್ಕಿಕ ಅಂತ್ಯ ಸಿಗುವ ತನಕ ಪ್ರತಿಭಟನೆಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಒಂದೆಡೆ ನೀರು ಉಳಿಸಿಕೊಳ್ಳಲು ಹೋರಾಟ ಮತ್ತೊಂದೆಡೆ ಬೆಳೆಬೆಳೆಯಲು ರೈತರ ಪರದಾಟ ಇದರ ನಡುವೆ ಅದ್ಧೂರಿ ದಸರಾ ನಡೆಸಿ ಸಂಭ್ರಮಿಸುವುದು ಹೇಗೆ?
ಜಲಾಶಯಗಳಲ್ಲಿ ನೀರು ಖಾಲಿ ಆದರೆ ಕುಡಿಯಲು ನೀರು ಸಿಗುವುದೇ ಕಷ್ಟವಾಗುವ ಪರಿಸ್ಥಿತಿ ಇದೆ. ನಮ್ಮ ರಾಜಕೀಯ ನಾಯಕರು ರಾಜ್ಯದ ಹಿತಕ್ಕಾಗಿ ರಾಜಕೀಯ ಪ್ರತಿಷ್ಠೆ ಬದಿಗಿಟ್ಟು ಒಂದಾಗಿ ಹೋರಾಟ ಮಾಡಲು ಇಚ್ಛಾಸಕ್ತಿಯ ಕೊರತೆಯಿರುವುದು ಎದ್ದು ಕಾಣಿಸುತ್ತಿದೆ. ಹೀಗಾಗಿಯೇ ಪ್ರತಿಬಾರಿಯೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿತ್ತು. ಆದರೆ ಸಮೃದ್ಧ ಮಳೆಯಾಗಿ ಕೆರೆಕಟ್ಟೆಗಳು, ಜಲಾಶಯಗಳು ತುಂಬಿದ್ದಲ್ಲದೆ ಯಥೇಚ್ಛವಾಗಿ ತಮಿಳುನಾಡಿಗೆ ನೀರು ಹರಿದು ಹೋಗಿತ್ತು. ಹೀಗಾಗಿ ಕಾವೇರಿ ನೀರಿನ ವಿವಾದವಾಗಲೇ ಇಲ್ಲ.
ಇದೀಗ ಅಧಿಕಾರದಲ್ಲಿರುವ ಸಿದ್ಧರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕಾವೇರಿ ನೀರು ವಿವಾದ ಈ ಬಾರಿ ಮುನ್ನಲೆಗೆ ಬರುತ್ತದೆ ಎಂಬ ಯಾವ ನಿರೀಕ್ಷೆಯೂ ಇರಲಿಲ್ಲ. ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತದೆ. ನಾಡು ಸುಭೀಕ್ಷವಾಗಿರುತ್ತದೆ ಎಂದೇ ನಂಬಿದ್ದರು. ಆದರೆ ಆಗಿದ್ದೇ ಬೇರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಜಲಾಶಯಗಳಲ್ಲಿ ನಿರೀಕ್ಷಿತ ನೀರು ಸಂಗ್ರಹವಾಗಿಲ್ಲ. ಇದರಿಂದ ಸರ್ಕಾರ ಕಾವೇರಿ ನೀರು ವಿವಾದವನ್ನು ಮತ್ತು ರೈತರ ಆಕ್ರೋಶವನ್ನು ಎದುರಿಸಲೇ ಬೇಕಾಗಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications