ಕಾವೇರಿ ಕಾವು: ರಾಮನಗರದಲ್ಲಿ ಸ್ಟಾಲಿನ್ ಅಣಕು ತಿಥಿ ಮಾಡಿ ಆಕ್ರೋಶ

ರಾಮನಗರ, ಸೆಪ್ಟೆಂಬರ್‌ 26: ರಾಜ್ಯದಲ್ಲಿ ದಿನೇ ದಿನೇ ಕಾವೇರಿ ಹೋರಾಟಗಳು ಹೆಚ್ಚಾಗುತ್ತಿದ್ದು, ಇಂದು ವಿವಿಧ ಸಂಘಟನೆಗಳು ರಾಮನಗರ ಬಂದ್‌ಗೆ ಕರೆ ನೀಡಿವೆ. ಜಿಲ್ಲೆಯಲ್ಲಿ ಈಗಾಗಲೇ ಬಂದ್‌ ಆರಂಭವಾಗಿದ್ದು, ರೈತರು ಹಾಗೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ಆರಂಭಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಜಿಲ್ಲಾ ಕರ್ನಾಟಕ ಜನಪರ ವೇದಿಕೆ ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

Cauvery Dispute: Karnataka Janapara Vedike Protest At Ramanagara

ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು ಘೋಷಣೆ ಕೂಗಿ ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಬಾಯಿ ಬಡಿದುಕೊಂಡು ಸ್ಟಾಲಿನ್ ಸತ್ತೋದ ಎಂದು ಆಕ್ರಂದನ ಮಾಡಿದ ಪ್ರತಿಭಟನಾಕಾರರು ತಮಿಳುನಾಡು ವಿರುದ್ಧ ರಾಮನಗರದಲ್ಲಿ ವಿನೂತನವಾಗಿ ಪ್ರತಿಭಟನೆ‌ ನಡೆಸಿದ್ದಾರೆ.

ಇಂದು ರಾಮನಗರ ಸಂಪೂರ್ಣ ಬಂದ್‌

ರಾಮನಗರ ಜಿಲ್ಲೆಯ ವಿವಿಧ ರೈತ ಹಾಗೂ ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಇಂದು ರಾಮನಗರ, ಚನ್ನಪಟ್ಟಣ, ಬಿಡದಿ ಸಂಪೂರ್ಣ ಸ್ತಬ್ಧವಾಗಲಿದ್ದು, ಕಾವೇರಿ ನೀರಿಗಾಗಿ ಹೋರಾಟದ ಬಂದ್‌ಗೆ ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ, ವಕೀಲರ ಸಂಘ, ಆಟೋ ಚಾಲಕರ ಸಂಘ ಸೇರಿ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದಾರೆ.

Cauvery Dispute: Karnataka Janapara Vedike Protest At Ramanagara

ಮೆಡಿಕಲ್, ಆಸ್ಪತ್ರೆ, ಹಾಲಿನ ಅಂಗಡಿ, ರೇಷ್ಮೆ ಮಾರುಕಟ್ಟೆ ಹೊರತು ಪಡಿಸಿ ಉಳಿದೆಲ್ಲ ಸೇವೆ ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಸಂಪೂರ್ಣ ಬಂದ್‌ ಆಗಲಿದೆ. ಬೆಳಗ್ಗೆ ಹತ್ತು ಗಂಟೆಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮೌನ ಪ್ರತಿಭಟನೆ ನಡೆಸಲಿರುವ ಹೋರಾಟಗಾರರು, ಬಳಿಕ ಹಳೇ ಮೈಸೂರು-ಬೆಂಗಳೂರು ಹೆದ್ದಾರಿ ತಡೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+