ಕನಕಪುರದ ಡಿಕೆಶಿ ನಿವಾಸದ ಮೇಲೆ 7 ಸಿಬಿಐ ಅಧಿಕಾರಿಗಳ ದಾಳಿ
ರಾಮನಗರ, ಅಕ್ಟೋಬರ್ 05 : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕನಕಪುರದ ನಿವಾಸದ ಮೇಲೆಯೂ ದಾಳಿ ನಡೆದಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸ, ಡಿ. ಕೆ. ಸುರೇಶ್ ನಿವಾಸದ ಮೇಲೆಯೂ ದಾಳಿಯಾಗಿದೆ.
Recommended Video
ಸೋಮವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲದಹಳ್ಳಿಯಲ್ಲಿರುವ ನಿವಾಸದ ಮೇಲೆಯೂ ದಾಳಿಯನ್ನು ನಡೆಸಲಾಗಿದೆ. 7 ಸಿಬಿಐ ಅಧಿಕಾರಿಗಳು ಇನ್ನೋವಾ ಕಾರಿನಲ್ಲಿ ಕನಕಪುರದ ನಿವಾಸಕ್ಕೆ ಆಗಮಿಸಿದ್ದಾರೆ.

ಡಿ. ಕೆ. ಶಿವಕುಮಾರ್ ಸದಾಶಿವನಗರ ನಿವಾಸ, ಕನಕಪುರ ನಿವಾಸ ಮತ್ತು ಡಿ. ಕೆ. ಸುರೇಶ್ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಸದಾಶಿವನಗರ ನಿವಾಸದಲ್ಲಿ ಐವರು ಸಿಬಿಐ ಅಧಿಕಾರಿಗಳು ಇದ್ದಾರೆ.
ಡಿ. ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಲು 2019ರ ಸೆಪ್ಟೆಂಬರ್ 25ರಂದು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿತ್ತು. ಇದನ್ನು ಪ್ರಶ್ನಿಸಿ ಡಿ. ಕೆ. ಶಿವಕುಮಾರ್ ಆಪ್ತ ಶಶಿಕುಮಾರ್ ಶಿವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ತನಿಖೆಗೆ ಹಸಿರು ನಿಶಾನೆ ತೋರಿಸಿತ್ತು.
ದೆಹಲಿಯಲ್ಲಿ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿ ಪ್ರಕರಣದ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ.












Click it and Unblock the Notifications