ಮುತ್ತಪ್ಪ ರೈ ಪುತ್ರನಿಗೆ CCB ನೋಟೀಸ್; ಬಿಡದಿ ಮನೆ ಮೇಲೆ ದಾಳಿ
ರಾಮನಗರ, ಅಕ್ಟೋಬರ್ 6: ಇಂದು ಬೆಳಿಗ್ಗೆ ದಿ.ಮುತ್ತಪ್ಪ ರೈ ಪುತ್ರನಿಗೆ ಸಿಸಿಬಿ ನೋಟೀಸ್ ನೀಡಿದ್ದು, ಮನೆಯ ಮೇಲೆ ದಾಳಿ ನಡೆಸಲಾಗಿದೆ. ಮುತ್ತಪ್ಪ ರೈಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿದೆ. ಸಿಸಿಬಿ ಪೊಲೀಸರು ರಿಕ್ಕಿ ರೈ ನನ್ನು ವಶಕ್ಕೆ ಪಡೆದಿದ್ದಾರೆ.
Recommended Video
ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಮೇಲೆ ಸಿಸಿಬಿ ದಾಳಿ ಮಾಡಲಾಗಿದೆ. ಮುತ್ತಪ್ಪ ರೈ ಮಗ ರಿಕ್ಕಿ ಕುರಿತು ಡ್ರಗ್ ಪೆಡ್ಲರ್ ಮಾಹಿತಿ ನೀಡಿದ ಹಿನ್ನೆಲೆ ಡ್ರಗ್ ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರಾಮನಗರ ಬಿಡದಿಯ ಮನೆಯಲ್ಲಿ ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ಸಿಸಿಬಿ ಶೋಧ ಕಾರ್ಯ ನಡೆಸಲಾಗಿದೆ.

ಬೆಳಿಗ್ಗೆ 6 ಗಂಟೆಗೆ ರಿಕ್ಕಿ ರೈ ಮನೆಗೆ ಏಳು ಕಾರುಗಳಲ್ಲಿ ಸಿಸಿಬಿ ಅಧಿಕಾರಿಗಳು ಬಂದಿದ್ದು, ನಾವು ಪೊಲೀಸರು, ಯಾರನ್ನೂ ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಹೋಗಿದ್ದರು. ಬಿಡದಿಯ ನಿವಾಸದಲ್ಲಿ ಕೇವಲ ಕೆಲಸಗಾರರು ಅಷ್ಟೇ ಉಳಿದುಕೊಂಡಿದ್ದರು ಎನ್ನಲಾಗಿದೆ.
ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್ ಅವರ ಮನೆ ಮೇಲೆ ದಾಳಿ ನಡೆಸಿದ್ದರು.











Click it and Unblock the Notifications